ಜಯನಗರ ವಿಧಾನಸಭಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಛೇರಿ ಉದ್ಘಾಟನೆ ಸಮಾರಂಭ
ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಸಿದ್ಧಾಂತ
ಬೆಂಗಳೂರು: ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಪ್ರತಿ ಕುಟುಂಬಕ್ಕೆ ಗ್ಯಾರಂಟಿ ಯೋಜನೆಗಳು ತಲುಪಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎನ್.ನಾಗರಾಜು ಹೇಳಿದರು.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಬಡವರ ಪರ ಯೋಜನೆಗಳನ್ನು ರೂಪಿಸುವಲ್ಲಿ ಕಾಂಗ್ರೆಸ್ ಪಕ್ಷ ಮೊದಲು. ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿರವರ ನೇತೃತ್ವದಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಜಯನಗರ ವಿಧಾನಸಭಾ ಕ್ಷೇತ್ರದ ಪ್ರತಿ ಮನೆಗಳಿಗೆ ತಲುಪಿಸಲಾಗಿದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಮತ ಬರಲು ಗ್ಯಾರಂಟಿ ಯೋಜನೆ ಸಹಕಾರಿಯಾಗಿದೆ ಎಂದರು.
ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಅರ್ಹ ಫಲಾನುಭವಿಗಳ ಮನೆಗಳಿಗೆ ಭೇಟಿ ನೀಡಿ ಕಾಂಗ್ರೆಸ್ ಪಕ್ಷದ ಸಾಧನೆಗಳನ್ನು ತಿಳಿಸಲಾಗುವುದು ಮತ್ತು ಫಲಾನುಭವಿಗಳನ್ನು ಗುರುತಿಸಿ ಗ್ಯಾರಂಟಿ ಯೋಜನೆ ಲಾಭ ತಲುಪುವಂತೆ ಮಾಡಲಾಗುವುದು ಎಂದು ಹೇಳಿದರು.
ರಾಮಲಿಂಗಾರೆಡ್ಡಿ, ಮಾಜಿ ಶಾಸಕಿ ಸೌಮ್ಯರೆಡ್ಡಿ, ಆಡಳಿತ ಪಕ್ಷದ ಮಾಜಿ ನಾಯಕರು, ಜಯನಗರ ವಿಧಾನಸಭಾ ಕ್ಷೇತ್ರದ ಗ್ಯಾರಂಟಿ ಯೋಜನೆಗಳ ಆನುಷ್ಠಾನ ಸಮಿತಿ ಅಧ್ಯಕ್ಷ ಎನ್.ನಾಗರಾಜು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ಸೌಮ್ಯರೆಡ್ಡಿ ಮಾತನಾಡಿ, ಕೆಪಿಸಿಸಿ ಅಧ್ಯಕ್ಷರು, ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ರವರು ಮತ್ತು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರ ನೇತೃತ್ವದಲ್ಲಿ 5 ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ರಾಜ್ಯದಲ್ಲಿ ಜಾರಿಗೆ ಬಂದಿವೆ. ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಪ್ರತಿ ಕುಟುಂಬಗಳಿಗೆ ಗ್ಯಾರಂಟಿ ಯೋಜನೆ ಲಾಭ ತಲುಪಿದೆ. ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಸಿದ್ದಾಂತದಂತೆ ಗ್ಯಾರಂಟಿ ಯೋಜನೆಗಳು ಎಲ್ಲ ವರ್ಗ, ಧರ್ಮದವರಿಗೆ ತಲುಪಿದೆ. ಆರ್ಥಿಕವಾಗಿ ಹಿಂದುಳಿದ ಬಡ ಕುಟುಂಬಗಳು ಮತ್ತು ಮಧ್ಯಮವರ್ಗದ ಜನರಿಗೆ ಆರ್ಥಿಕವಾಗಿ ಸಬಲರಾಗುವಲ್ಲಿ ಗ್ಯಾರಂಟಿ ಯೋಜನೆ ಸಫಲವಾಗಿದೆ ಎಂದರು.
ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆ 839481 ಮತ್ತು ಗೃಹ ಜ್ಯೋತಿ 3295114, ಅನ್ನಭಾಗ್ಯ 31,56,734 ಮತ್ತು ಶಕ್ತಿ ಯೋಜನೆ 96.59ಲಕ್ಷ ಹಾಗೂ ಯುವನಿಧಿ 10,801 ಗ್ಯಾರಂಟಿ ಯೋಜನೆಯ ಲಾಭ ತಲುಪಿದೆ. ರಾಜ್ಯದಲ್ಲಿರುವ ವಿರೋಧ ಪಕ್ಷಕ್ಕೆ ಗ್ಯಾರಂಟಿ ಯೋಜನೆಯ ಯಶಸ್ಸು ಸಹಿಕೊಳ್ಳುವುದಕ್ಕೆ ಆಗುತ್ತಿಲ್ಲ. ಬಡವರ ಪರ ಯೋಜನೆಗಳ ವಿರೋಧಿ ನಿಲುವು ಬಿಜೆಪಿ ಪಕ್ಷವಾಗಿದೆ ಎಂದು ಹೇಳಿದರು.
ಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.







