ಬೆಂಗಳೂರು: ಶಕ್ತಿ ಯೋಜನೆ ಸೇರಿದಂತೆ ಯಾವುದೇ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ, ತಿರುಚಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟೀಕರಣ ನೀಡಿದರು.
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
- ದಶಕ ಮೀರಿದ ಕಾನೂನು ಹಾದಿ ಮತ್ತು ಉತ್ತರವಿಲ್ಲದ ಪ್ರಶ್ನೆಗಳು
- ಪರಿಸರವನ್ನೂ ಉಳಿಸಬೇಕು, ಮಲೆನಾಡಿನ ರೈತರ ಬದುಕನ್ನೂ ಉಳಿಸಬೇಕು: ಮಧು ಬಂಗಾರಪ್ಪ
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
ವಿಪಕ್ಷಗಳು ಮತ್ತು ಮಾಧ್ಯಮಗಳು ಶಕ್ತಿ ಯೋಜನೆ ಕುರಿತ ಅವರ ಹೇಳಿಕೆಗೆ ವಿವಾದದ ಸ್ವರೂಪ ನೀಡಿದ ಹಿನ್ನೆಲೆಯಲ್ಲಿ ಸ್ಪಷ್ಟೀಕರಣ ನೀಡಿದ ಅವರು, ಈ ವಿಚಾರದಲ್ಲಿ ನನ್ನ ಹೇಳಿಕೆಯನ್ನು ತಿರುಚಲಾಗಿದೆ. ಆರ್ಥಿಕವಾಗಿ ಸದೃಢವಾಗಿರುವವರು, ಐಟಿಬಿಟಿ ಸಂಸ್ಥೆಗಳವರು, ಎಂಎನ್ ಸಿ ಕಂಪನಿಗಳ ಸಿಬ್ಬಂದಿ ಸೇರಿದಂತೆ ಅನೇಕ ಮಹಿಳೆಯರು ತಮಗೆ ಬಸ್ ಗಳಲ್ಲಿ ಉಚಿತ ಪ್ರಯಾಣದ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ ಎಂದರು.
ತಾವು ಕೆಲಸ ಮಾಡುವ ಕಂಪನಿಗಳಲ್ಲಿ ಸಂಚಾರಕ್ಕಾಗಿ ಪ್ರತ್ಯೇಕ ಭತ್ಯೆ ನೀಡಲಾಗುತ್ತಿದೆ. ಹೀಗಾಗಿ ನಮಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಈ ವಿಚಾರದ ಬಗ್ಗೆ ನಾನು ಸಚಿವರ ಜತೆ ಚರ್ಚೆ ಮಾಡುತ್ತೇನೆ ಎಂದು ಹೇಳಿದ್ದೇನೆ ಅಷ್ಟೇ. ಯೋಜನೆ ನಿಲ್ಲಿಸುತ್ತೇವೆ ಎಂದು ಎಲ್ಲಿಯೂ ಹೇಳಿಲ್ಲ ಎಂದರು.
ನಮ್ಮ ಐದು ಗ್ಯಾರಂಟಿ ಯೋಜನೆಗಳ ಪೈಕಿ ಯಾವುದೇ ಯೋಜನೆಯನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ. ಈ ಯೋಜನೆ ಸೌಲಭ್ಯ ಬೇಡ ಎಂದು ಹೇಳುವವರಿಗೆ ಬಲವಂತ ಮಾಡಲು ಸಾಧ್ಯವೇ? ಅವರ ಸಂಖ್ಯೆ ಶೇಕಡಾ 7-8 ರಷ್ಟು ಇರಬಹುದು. ಹಿಂದೆ ಅಡುಗೆ ಅನಿಲಕ್ಕೆ ನೀಡಲಾಗುತ್ತಿದ್ದ ಸಬ್ಸಿಡಿ ವಿಚಾರದಲ್ಲಿ ಪ್ರಧಾನಿ ಮೋದಿ ಅವರು ಸ್ವಇಚ್ಛೆಯಿಂದ ಸಬ್ಸಿಡಿ ತ್ಯಜಿಸುವವರಿಗೆ ಅವಕಾಶ ನೀಡಿದರು. ಆ ರೀತಿ ಆಲೋಚನೆ ಮಾಡುವುದಾಗಿ ಹೇಳಿದ್ದೇನೆ. ಕಾಂಗ್ರೆಸ್ ಅಧ್ಯಕ್ಷನಾಗಿ ಹಾಗೂ ಉಪಮುಖ್ಯಮಂತ್ರಿಯಾಗಿ ಮತ್ತೊಮ್ಮೆ ಸ್ಪಷ್ಟ ಪಡಿಸುತ್ತೇನೆ. ಐದೂ ಗ್ಯಾರಂಟಿ ಯೋಜನೆ ಮುಂದುವರಿಯುತ್ತವೆ ಎಂದರು.



