ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದ್ದು, ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಐದೂ ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದಿದೆ. ಇದರ ಪರಿಣಾಮವಾಗಿ 1 ಕೋಟಿಗೂ ಹೆಚ್ಚು ಜನರು ಬಡತನ ರೇಖೆಯಿಂದ ಹೊರಬಂದಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಗ್ಯಾರಂಟಿ ಯೋಜನೆಗಳಿಂದಾಗಿ ಹಣದ ಹರಿವು ನಿರಂತರವಾಗಿದ್ದು, ಜನರ ಕೊಳ್ಳುವ ಶಕ್ತಿ ಹೆಚ್ಚಾಗಿದೆ. ಇದು ರಾಜ್ಯದ ಪ್ರಗತಿಗೂ ಪರೋಕ್ಷವಾಗಿ ಪ್ರಯೋಜವಾಗುತ್ತಿದೆ. ಹೀಗಾಗಿ ಗ್ಯಾರಂಟಿ ಯೋಜನೆ ಯಾವುದೇ ಬದಲಾವಣೆ ಇಲ್ಲದೆ. ಪ್ರಸಕ್ತ ಸ್ವರೂಪದಲ್ಲಿ ಮುಂದುವರಿಯುತ್ತದೆ ಎಂದರು.
ಕಾಂಗ್ರೆಸ್ ಪಕ್ಷ ಮೊದಲಿನಿಂದಲೂ ಬಡವರು, ದುರ್ಬಲರು, ವಂಚಿತರು, ಶೋಷಿತರ ಪರವಾಗಿ ನಿಂತಿದೆ. ಅವರ ಸರ್ವಾಂಗೀಣ ಅಭಿವೃದ್ಧಿಗಾಗಿ, ಕಲ್ಯಾಣಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿದೆ. ನಾವು ಎಲ್ಲ ಸಮಾಜಮುಖಿ ಮತ್ತು ಸಾಮಾಜಿಕ ಕಲ್ಯಾಣ ಯೋಜನೆಗಳನ್ನು ಆರ್ಥಿಕ ಲಾಭ ನಷ್ಟದಿಂದ ನೋಡಬಾರದು. ಮುಖ್ಯಮಂತ್ರಿಗಳು ಗ್ಯಾರಂಟಿ ಯೋಜನೆ ಮುಂದುವರಿಯುತ್ತದೆ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಅದು ಮುಂದುವರಿಯುತ್ತದೆ ಎಂದರು.
ಇನ್ನು ಈ ಕುರಿತು ಪ್ರತಿಕ್ರಿಯಿಸಿದ ಗೃಹ ಸಚಿವ ಪರಮೇಶ್ವರ್, ವಿಧಾನಸಭೆ ಚುನಾವಣೆ ಸಮಯದಲ್ಲಿ ನೀಡಿದ ಭರವಸೆಯಂತೆ ಜಾರಿಗೊಳಿಸಿರುವ ಪಂಚ ಗ್ಯಾರಂಟಿಗಳನ್ನು ಇದೀಗ ಸರ್ಕಾರ ಪರಿಷ್ಕರಿಸಲಿದೆ ಎಂಬ ಸುದ್ದಿ ದಟ್ಟವಾಗಿದೆ. ಈ ನಡುವೆ, ಸದ್ಯಕ್ಕೆ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಇಲ್ಲ ಎಂದರು.
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಕುರಿತು ಅಲ್ಲಲ್ಲಿ ಶಾಸಕರು, ಸಚಿವರು ಸೇರಿದಾಗ ಅನೌಪಚಾರಿಕವಾಗಿ ಸಮಾಲೋಚನೆಗಳಾಗಿವೆ. ಆದರೆ ಯಾವುದೇ ಅಂತಿಮ ನಿರ್ಧಾರವಾಗಿಲ್ಲ, ಸದ್ಯಕ್ಕೆ ಈ ವರ್ಷ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಪ್ರಸ್ತಾಪ ಇಲ್ಲ ಎಂದರು.
ಗ್ಯಾರಂಟಿ ಯೋಜನೆಗಳು ಬಡವರಿಗೆ ಮಾತ್ರ ತಲುಪಬೇಕು ಎಂಬುದು ಬಹಳ ಜನರ ಅಭಿಪ್ರಾಯವಾಗಿದೆ. ಈಗಾಗಲೇ ಬಜೆಟ್ನಲ್ಲಿ ಗ್ಯಾರಂಟಿ ಯೋಜನೆಗಳಿಗೆ ರೂ. 56 ಸಾವಿರ ಕೋಟಿ ಮೀಸಲಿಡಲಾಗಿದೆ. ಹೀಗಾಗಿ ಪ್ರಸಕ್ತ ವರ್ಷದಲ್ಲಿ ಗ್ಯಾರಂಟಿ ಯೋಜನೆಗಳನ್ನು ಪರಿಷ್ಕರಣೆ ಮಾಡುವುದು ಸಾಧ್ಯವಿಲ್ಲ ಎಂದರು.
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಚರ್ಚೆಗಳಾಗುತ್ತಿರುವುದು ನಿಜ. ಶಾಸಕರು, ಕಾರ್ಯಕರ್ತರು ಸಾರ್ವಜನಿಕವಾಗಿ ಅಲ್ಲಲ್ಲಿ ಮಾತನಾಡಿರಬಹುದು. ಪಕ್ಷದ ವೇದಿಕೆಯಲ್ಲಿ, ಸರ್ಕಾರದ ಹಂತದಲ್ಲಿ ಚರ್ಚೆಯಾಗಿಲ್ಲ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಶೇ.13ರಷ್ಟು ಮತ ಹೆಚ್ಚಾಗಿವೆ. ಗ್ಯಾರಂಟಿ ಯೋಜನೆಗಳಿಂದ ಮತ ಹೆಚ್ಚಾಗಿದೆ ಎಂದು ಯಾಕೆ ವಿಶ್ಲೇಷಣೆ ಮಾಡಬಾರದು ಎಂದರು.




