ಕೋಲಾರ: ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಿಂದ ಅತ್ಯಧಿಕ ಸಂಸದರನ್ನು ಆಯ್ಕೆ ಮಾಡಬೇಕೆಂದು ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಕೋಲಾರದ ಕುರುಡುಮಲೆ ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಪಕ್ಷದ ಅಧಿಕೃತ ಪ್ರಚಾರಕ್ಕೆ ಚಾಲನೆ ನೀಡಿದೆ.
- ಅಲೆಮಾರಿಗಳು ಇನ್ನೂ ಅತ್ಯಂತ ಹೀನಾಯ ಸ್ಥಿತಿಗೆ ತಲುಪುವ ಸಾಧ್ಯತೆ: ವಡ್ಡಗೆರೆ ನಾಗರಾಜಯ್ಯ
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಬಹುತೇಕ ಎಲ್ಲ ನಾಯಕರು ಈ ವೇಳೆ ಉಪಸ್ಥಿತರಿದ್ದು, ಎರಡನೇ ಹಂತದ ಪ್ರಜಾಧ್ವನಿ ಯಾತ್ರೆಗೆ ಸಾಕ್ಷಿಯಾದರು.
ಕಾಂಗ್ರೆಸ್ಸಿನ ಈ ಪ್ರಜಾಧ್ವನಿ ಯಾತ್ರೆ ಆರಂಭವಾಗಬೇಕಿದ್ದಾದರೂ ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಬಿಕ್ಕಟ್ಟು ತೀವ್ರಗೊಂಡ ಹಿನ್ನೆಲೆಯಲ್ಲಿ ಇದನ್ನು ಮುಂದೂಡಲಾಗಿತ್ತು. ಇದೀಗ ಕೋಲಾರದಲ್ಲಿ ಬಿಕ್ಕಟ್ಟು ಬಗೆಹರಿದಿದ್ದು, ಎಲ್ಲ ನಾಯಕರು ಒಟ್ಟಾಗಿ ಪಾಲ್ಗೊಳ್ಳುವ ಮೂಲಕ ಶಕ್ತಿ ಪ್ರದರ್ಶನ ನಡೆಸಿದರು.
ಇದೇ ವೇಳೆ, ಸಿದ್ದರಾಮಯ್ಯ ಮಾತನಾಡಿ ವಿಧಾನಸಭೆ ಚುನಾವಣೆ ವೇಳೆ ನಾವು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ. ಬಿಜೆಪಿ ಸೋಲುವ ಭೀತಿಯಿಂದ ಗ್ಯಾರಂಟಿಗಳು ನಿಂತು ಹೋಗುತ್ತವೆ ಎಂದು ಸುಳ್ಳು ಹೇಳುತ್ತಿದೆ. ಇದಕ್ಕೆ ಸೊಪ್ಪು ಹಾಕಬೇಡಿ. ಚುನಾವಣೆ ಮುಗಿದ ನಂತರವೂ ಗ್ಯಾರಂಟಿಗಳು ಮುಂದುವರೆಯಲಿವೆ. ಗ್ಯಾರಂಟಿಗಳಿಗೆ 5 ವರ್ಷಗಳ ಗ್ಯಾರಂಟಿ ಇದೆ ಎಂದು ಸ್ಪಷ್ಟೀಕರಣ ನೀಡಿದರು.
ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ರಸಗೊಬ್ಬರ, ದಿನಸಿ ಸಾಮಗ್ರಿ ಸೇರಿದಂತೆ ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಜನಸಾಮಾನ್ಯರನ್ನು ಸಂಕಷ್ಟಕ್ಕೆ ಸಿಲುಕುವಂತೆ ಮಾಡಿತು. ಇದನ್ನು ಅರ್ಥ ಮಾಡಿಕೊಂಡ ನಾವು ಗ್ಯಾರಂಟಿಗಳನ್ನು ಘೋಷಿಸಿದ್ದು, ಅವುಗಳನ್ನು ಜಾರಿಗೆ ತರುವ ಮೂಲಕ ಜನರ ಬದುಕನ್ನು ಹಸನು ಮಾಡಲು ಪ್ರಯತ್ನಿಸಿದ್ದೇವೆ ಎಂದರು.
ಆರಂಭದಲ್ಲಿ ಈ ಗ್ಯಾರಂಟಿಗಳನ್ನು ಜಾರಿಗೊಳಿಸಲು ಸಾಧ್ಯವೇ ಇಲ್ಲ ಎಂದು ಬಿಜೆಪಿ ಸುಳ್ಳು ಹೇಳುತ್ತಾ ಬಂತು. ಈಗ ಗ್ಯಾರಂಟಿ ಜಾರಿಯಾಗಿದೆ, ಅದನ್ನು ನಂಬಲು ಸಾಧ್ಯವಿಲ್ಲದೆ ಈಗ ಜನರಿಗೆ ಲೋಕಸಭೆ ಚುನಾವಣೆ ನಂತರ ಗ್ಯಾರಂಟಿ ನಿಲ್ಲುತ್ತವೆ ಎಂಬ ಸುಳ್ಳು ಹೇಳುತ್ತಿದೆ. ಇದನ್ನು ಯಾವುದೇ ಕಾರಣಕ್ಕೂ ನಂಬಬೇಡಿ ಎಂದು ಮನವಿ ಮಾಡಿದರು.
ಡಿ.ಕೆ.ಶಿವಕುಮಾರ್ ಮಾತನಾಡಿ, ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ದುರಾಡಳಿತ ಅಂತ್ಯವಾಗಲಿದೆ. ಕಾಂಗ್ರೆಸ್ ಕರ್ನಾಟಕದಲ್ಲಿ ಘೋಷಿಸಿರುವ ಗ್ಯಾರಂಟಿಗಳನ್ನು ರಾಷ್ಟ್ರೀಯ ಮಟ್ಟದಲ್ಲೂ ಜಾರಿಗೆ ತರಲಿದೆ ಎಂದರು.
ಬಿಜೆಪಿಯ ಸುಳ್ಳು ಮಾತುಗಳಿಗೆ ಮರುಳಾಗಬೇಡಿ. ದೇಶದಲ್ಲಿ ಬಿಜೆಪಿ ವಿರುದ್ಧ ಜನಾಭಿಪ್ರಾಯವಿದೆ. ಹೀಗಾಗಿ ಅನೇಕ ಮಂದಿ ಹಾಲಿ ಸಂಸದರಿಗೆ ಬಿಜೆಪಿ ಟಿಕೆಟ್ ನೀಡಿಲ್ಲ. ಈ ವಸ್ತು ಸ್ಥಿತಿಯನ್ನು ಅರ್ಥ ಮಾಡಿಕೊಂಡು ಮತದಾರರು ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಬೇಕು ಎಂದರು.
ಆನಂತರ ಎಲ್ಲ ನಾಯಕರು ಮುಳಬಾಗಿಲು ಮತ್ತು ಕೋಲಾರ ಸುತ್ತಮುತ್ತ ರೋಡ್ ಶೋ ನಡೆಸುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಮತಯಾಚಿಸಿದರು.



