ಬೆಂಗಳೂರು: ಅತಿಥಿ ಉಪನ್ಯಾಸಕರ ಬಾಕಿ ಇರುವ ವೇತನವನ್ನು ಕಾಲಮಿತಿಯೊಳಗೆ ಬಿಡುಗಡೆ ಮಾಡಲಾಗುವುದು ಎಂದು ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ವಿಧಾನ ಪರಿಷತ್ ನಲ್ಲಿ ಪ್ರಶ್ನೆ ಒಂದಕ್ಕೆ ಉತ್ತರಿಸಿದ ಅವರು, ಅತಿಥಿ ಉಪನ್ಯಾಸಕರಿಗೆ ಸರ್ಕಾರ ವತಿಯಿಂದ ಪ್ರತಿ ತಿಂಗಳು 10,500 ರೂ. ಗೌರವ ಧನ ನೀಡಿಲಾಗುತ್ತಿದೆ. ಇತ್ತೀಚಿಗೆ ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಮತ್ತೆ 2 ಸಾವಿರ ರೂ. ಹೆಚ್ಚಳ ಮಾಡಿದ್ದಾರೆ ಎಂದರು.
ಅತಿಥಿ ಉಪನ್ಯಾಸಕರ ಗೌರವ ಧನವನ್ನು ಹೆಚ್ಚಳ ಮಾಡಬೇಕು ಎಂದು ಸದಸ್ಯರು ಮನವಿ ಮಾಡಿಕೊಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಜೊತೆಗೆ ಚರ್ಚೆಸಿ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳಲಾಗುವುದು. ಅವರ ಹಿತವನ್ನು ಕಾಪಾಡಲು ನಮ ಸರ್ಕಾರ ಬದ್ಧವಿದೆ ಎಂದರು.
ವೃಂದ ಮತ್ತು ನೇಮಕಾತಿ ನಿಯಮಗಳು ಬೇರೆ ಬೇರೆಯಾಗಿರುವುದರಿಂದ ಸರ್ಕಾರಿ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರಿಗೆ ಮುಂಬಡ್ತಿ ನೀಡಲು ಸಾಧ್ಯವಿಲ್ಲ. ಅದಾಗ್ಯೂ ಮತ್ತೊಮ್ಮೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಮುಖ್ಯ ಶಿಕ್ಷಕರು ಭೋದನೆಯಲ್ಲಿ ವಿಷಯ ಪ್ರಾವೀಣ್ಯತೆ ಹಾಗೂ ಅನುಭವನ್ನು ಹೊಂದಿರುತ್ತಾರೆ. ಸಹ ಶಿಕ್ಷಕರ ಅನುಪಸ್ಥಿತಿಯಲ್ಲಿ ಸದರಿ ವಿಷಯ ಭೋದಿಸಲಿದ್ದಾರೆ. ಆದರೆ, ದೈಹಿಕ ಶಿಕ್ಷಕರಿಗೆ ವಿಷಯ ಬೋಧನೆ ತರಬೇತಿಯಿಲ್ಲ. ಹೀಗಾಗಿ, ಸಹ ಶಿಕ್ಷಕರ ಅನುಪಸ್ಥಿತಿಯಲ್ಲಿ ವಿಷಯ ಬೋಧನೆಯನ್ನು ನಿರ್ವಹಿಸಲು ಸಾಧ್ಯವಾಗುವುದಿಲ್ಲ ಎಂದರು.
ದೈಹಿಕ ಶಿಕ್ಷಕರ ಜೇಷ್ಠತಾ ಪಟ್ಟಿಯನ್ನು ಪ್ರತ್ಯೇಕವಾಗಿ ನಿರ್ವಹಿಸಲಾಗುತ್ತಿದ್ದು, ಇವರ ಪ್ರಾವೀಣ್ಯತೆ ಹಾಗೂ ಅನುಭವ ಆಧಾರದ ಮೇಲೆ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರು, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ, ಸಹಾಯಕ ನಿರ್ದೇಶಕರು, (ದೈಹಿಕ ಶಿಕ್ಷಣ), ಸಹ ನಿರ್ದೇಶಕರು (ದೈಹಿಕ ಶಿಕ್ಷಣ) ಹುದ್ದೆಗಳಿಗೆ ಮುಂಬಡ್ತಿಗೆ ಅವಕಾಶ ಕಲ್ಪಿಸಲಾಗಿದೆ. ಮೇಲಿನ ಅಂಶಗಳಿಂದ ದೈಹಿಕ ಶಿಕ್ಷಣ ಶಿಕ್ಷಕರಿಗೆ ಮುಖ್ಯ ಶಿಕ್ಷಕ ಹುದ್ದೆಗೆ ಮುಂಬಡ್ತಿ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಪಪಡಿಸಿದರು.




