ರಾಜ್ಯದಲ್ಲಿ ಗುಲಾಬ್ ಚಂಡಮಾರುತ: ಹವಾಮಾನ ಇಲಾಖೆ ಮುನ್ಸೂಚನೆ

5 years ago

ಬೆಂಗಳೂರು: ಇಂದಿನಿಂದ 4 ದಿನಗಳವರೆಗೆ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಹಾಗೂ ಬೀದರ್, ಕಲಬುರ್ಗಿ, ವಿಜಯಪುರದಲ್ಲಿ ಇಂದಿನಿಂದ 4 ದಿನಗಳವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಗುಲಾಬ್ ಚಂಡಮಾರುತದ ಪ್ರಭಾವದಿಂದಾಗಿ ಮಹಾರಾಷ್ಟ್ರದಲ್ಲಿ ಭಾರೀ ಮಳೆ ಸುರಿಯುತ್ತಿದೆ. ಇದುವರೆವೆ 25 ಜನ ಬಲಿಯಾಗಿದ್ದಾರೆ. ಮಹಾರಾಷ್ಟ್ರದಲ್ಲಿ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿದೆ. ಇಂದು ಕೂಡ ಮಳೆಯಾಗುವ ನಿರೀಕ್ಷೆ ಇದೆ.

ಇನ್ನು ಅಕ್ಟೋಬರ್ 1ರಂದು ಶಾಹೀನ್ ಚಂಡಮಾರುತ ಅಪ್ಪಳಿಸಲಿದೆ. ಭಾರತದ ಪೂರ್ವ ಹಾಗೂ ಪಶ್ಚಿಮ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ಗುಲಾಬ್ ಚಂಡಮಾರುತವೇ ಅರಬ್ಬಿ ಸಮುದ್ರದಲ್ಲಿ ಶಾಹೀನ್ ಚಂಡಮಾರುತವಾಗಿ ರೂಪಾಂತರ ಹೊಂದಲಿದೆ ಎಂದು ಇಲಾಖೆ ಹೇಳಿದೆ.

Leave a Reply