ಬಳ್ಳಾರಿ: ಹನ್ನೆರಡನೆ ಶತಮಾನದ ವಚನ ಯುಗದ ಜನಸಾಮಾನ್ಯರಲ್ಲಿ ಆಧ್ಯಾತ್ಮಿಕ ಚಿಂತನೆಗಳನ್ನು ಬಿತ್ತಿದವರು ಶಿವಶರಣ ಹಡಪದ ಅಪ್ಪಣ್ಣ ಎಂದು ಕಿಷ್ಕಿಂದ ವಿಶ್ವ ವಿದ್ಯಾಲಯದ ಭೌತವಿಜ್ಞಾನ ವಿಭಾಗದ ಪ್ರಾಧ್ಯಾಪಕರು ಮತ್ತು ಡೀನ್ ಪ್ರೊ .ಎಸ್.ಮಂಜುನಾಥ ಹೇಳಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಏರ್ಪಡಿಸಿದ್ದ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದರು.
ಹಡಪದ ಅಪ್ಪಣ್ಣನವರು ಪ್ರಸ್ತುತ ದಿನಮಾನಗಳ ಮನುಷ್ಯರ ಮನೋಭಾವನೆಯನ್ನು ಅಂದೇ ತಮ್ಮ ವಚನಗಳ ಮೂಲಕ ಸಾಬೀತುಪಡಿಸಿದ್ದಾರೆ. ಹಡಪದ ಅಪ್ಪಣ್ಣ ಅವರು ಯುವ ಕವಿಗಳ ಸ್ಪೂರ್ತಿ ಆಗಿದ್ದು, ಜೀವನದ ಬಗ್ಗೆ ಅರಿವು ಮೂಡಿಸುವ ಅವರ ವಚನಗಳೆ ನಿದರ್ಶನವಾಗಿವೆ ಎಂದರು.
ಜನಸಾಮಾನ್ಯರು ತಮ್ಮ ಜೀವನದ ತಾತ್ಪರ್ಯ ತಿಳಿದುಕೊಂಡು, ಗುರು ಹಿರಿಯರಿಗೆ ವಂದಿಸಿ, ವಿನಯದಿಂದ ಜೀವನ ನಡೆಸಬೇಕೆಂಬುದು ಶಿವಶರಣ ಹಡಪದ ಅಪ್ಪಣ್ಣನವರ ಆಶಯವಾಗಿತ್ತು ಎಂದು ಹೇಳಿದ ಅವರು, ಕೆಲವೊಂದು ವಚನಗಳ ಸ್ವಾರಸ್ಯವನ್ನು ಇದೇ ಸಂದರ್ಭದಲ್ಲಿ ವಿವರಿಸಿದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಜಂಗಮ ಹೊಸಳ್ಳಿಯ ಪುರವರ್ಗ ಮಠದ ಶ್ರೀ ಶಂಭುಲಿಂಗ ಶಿವಾಚಾರ್ಯ ಸ್ವಾಮಿಜಿ ಮಾತನಾಡಿ, ಶಿವಶರಣ ಅಪ್ಪಣ್ಣನವರು ಕಾಯ, ವಾಚ, ಮನಸ್ಸಿನಿಂದ ಭಕ್ತಿಪೂರ್ವಕವಾಗಿ ನ್ಯಾಯ ಹಾಗೂ ಧರ್ಮದ ಗೌರವ ಸಂಪಾದನೆ ಮಾಡಿದರು ಎಂದರು.
ಹನ್ನೆರಡನೇ ಶತಮಾನದ ಪ್ರಸಿದ್ದ ವಚನಕಾರರಲ್ಲಿ ಒಬ್ಬರಾದ ಹಡಪದ ಅಪ್ಪಣ್ಣನವರು ತಮ್ಮ ವಚನ ತತ್ವಾದರ್ಶಗಳ ಮೂಲಕ ಸೂರ್ಯ ಚಂದ್ರ ಇರುವವರೆಗೂ ಅಜರಾಮರವಾಗಿರುತ್ತಾರೆ ಎಂದರು.
ಜಗಜ್ಯೋತಿ ಬಸವಣ್ಣನವರ ಅನುಯಾಯಿ ಹಾಗೂ ಅವರ ಆಪ್ತ ಕಾರ್ಯದರ್ಶಿಯಾಗಿದ್ದ ಅಪ್ಪಣ್ಣನವರು ಸಮಾಜದಲ್ಲಿ ಸಮಾನತೆ, ಐಕ್ಯತೆ ಹಾಗೂ ಒಗ್ಗಟ್ಟಿನ ಸಾರವನ್ನು ತಮ್ಮ ವಚನಗಾಯನಗಳ ಮುಖಾಂತರ ಸಾರಿ, ಸಮಾಜ ಪರಿವರ್ತನೆಯಾಗುವಲ್ಲಿ ಶ್ರಮವಹಿಸಿದರು ಎಂದರು.
ಶಿವಶರಣ ಹಡಪದ ಅಪ್ಪಣ್ಣನವರಂತೆ ಮನುಷ್ಯರು ಮಾನವೀಯ ಗುಣ, ನೀತಿ ಮೌಲ್ಯಗಳನ್ನು ಅಳವಡಿಸಿಕೊಂಡು ಮಾದರಿ ಜೀವನ ನಡೆಸಬೇಕು ಎಂದರು.
ಈ ವೇಳೆ ಶಿವಶರಣ ಹಡಪದ ಅಪ್ಪಣ್ಣ ಅವರ ಭಾವಚಿತ್ರಕ್ಕೆ ಗಣ್ಯರು ಪುಷ್ಪ ನಮನ ಸಲ್ಲಿಸಿದರು. ಕೆ.ವಸಂತ್ಕುಮಾರ್ ಅವರ ತಂಡದಿಂದ ವಚನ ಸಂಗೀತ ಆಯೋಜಿಸಲಾಗಿತ್ತು.
ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಶಿವಶರಣ ಹಡಪದ ಅಪ್ಪಣ್ಣ ಅವರ ಭಾವಚಿತ್ರದೊಂದಿಗೆ ನಗರದ ಹೆಚ್.ಆರ್.ಗವಿಯಪ್ಪ ವೃತ್ತದಿಂದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದವರೆಗೆ ಭವ್ಯ ಮೆರವಣಿಗೆ ಜರುಗಿತು.
ಈ ಸಂಧರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಜಿಲ್ಲಾ ಹಡಪದ ಅಪ್ಪಣ್ಣ ಸೇವಾ ಸಂಘದ ಜಿಲ್ಲಾಧ್ಯಕ್ಷ ಹೆಚ್.ರುದ್ರಪ್ಪ, ಸಮಾಜದ ಮುಖಂಡರಾದ ಸಿ.ಕೊಟ್ರೇಶ, ಹೆಚ್.ತಿಪ್ಪೇಸ್ವಾಮಿ ಸೇರಿದಂತೆ ಇಲಾಖೆಯ ಸಿಬ್ಬಂದಿ, ಸವಿತಾ ಸಮಾಜದ ಮುಖಂಡರು, ಸಾರ್ವಜನಿಕರು ಹಾಜರಿದ್ದರು.




