ಕೊಪ್ಪಳ: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆಯಿಂದ ಯುವಕ ಮತ್ತು ಯುವತಿಯರಿಗೆ ಕುರಿ ಹಾಗೂ ಮೇಕೆ ಸಾಕಾಣಿಕೆ ತರಬೇತಿಗಳನ್ನು ಉಚಿತವಾಗಿ ನೀಡಲಾಗುತ್ತಿದ್ದು, ಆಸಕ್ತ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕರಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
19 ರಿಂದ 45 ವಯೋಮಾನದ ನಿರುದ್ಯೋಗಿ ಯುವಕರಿಗಾಗಿ ಎಪ್ರಿಲ್ ಮಾಹೆಯ ಮೊದಲನೆ ವಾರದಿಂದ ಉಚಿತ ತರಬೇತಿಗಳನ್ನು ನೀಡಲಾಗುತ್ತದೆ. ಈ ತರಬೇತಿಗಳು ಸ್ವ-ಉದ್ಯೋಗ ಪ್ರಾರಂಭಿಸಿ, ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗಲಿವೆ. ತರಬೇತಿಯು ಊಟ ಹಾಗೂ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿದ್ದು, ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
ತರಬೇತಿಯಲ್ಲಿ ಕೌಶಲ್ಯ, ಸಾಧನಾ ಪ್ರೇರಣಾ ತರಬೇತಿ, ಉದ್ಯಮಶೀಲತೇಯ ದಕ್ಷ ಗುಣಗಳು, ಹೊಸ ಉದ್ಯಮದ ಸ್ಥಾಪನೆ ಬಗ್ಗೆ ಮಾಹಿತಿ, ಮಾರುಕಟ್ಟೆ ಸಮೀಕ್ಷೆ, ಮಾರಾಟದ ತಂತ್ರಗಳು, ಯಶಸ್ವಿ ಉದ್ಯಮಗಳಿಂದ ಅನುಭವ ಹಂಚಿಕೆ, ಕ್ಷೇತ್ರ ಬೇಟಿ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿನಿಂದ ಸಾಲ ಪಡೆದು ಸ್ವ-ಉದ್ಯೋಗ ಪ್ರಾರಂಭಿಸಲು ಬೇಕಾಗುವ ಜ್ಞಾನ, ಸರಕಾರಿ ಯೋಜನೆಗಳ ಮತ್ತು ಯೋಜನಾ ವರದಿ ತಯಾರಿಕೆ ಇನ್ನಿತರ ಮಾಹಿತಿಗಳನ್ನು ನೀಡಲಾಗುತ್ತದೆ.
ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸಗಳನ್ನು ನೋಂದಾಯಿಸಲು ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುವುದು. ಆಸಕ್ತರು ನಿರ್ದೇಶಕರು, ಕೆನರಾ ಬ್ಯಾಂಕ್ ದೇಶಪಾಂಡೆ, ಆರ್ಸೆಟ್ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ವಿಳಾಸಕ್ಕೆ ಅಥವಾ ಮೊ.ಸಂ: 8970145354, 9483485488, ಹಾಗೂ 9482188780 ಗೆ ಸಂಪರ್ಕಿಸಬಹುದು.




