ಹಲವು ಪ್ರಕರಣಗಳಲ್ಲಿ ಭಾಗಿ
ದಾವಣಗೆರೆ: ಜಗಳೂರು ತಾಲ್ಲೂಕಿನ ಹನುಮಂತಾಪುರ ಗೊಲ್ಲರಹಟ್ಟಿ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆ ಸಹ ಶಿಕ್ಷಕ ಆಂಜನೇಯ ನಾಯ್ಕ ಇವರನ್ನು ಅಮಾನತು ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ವೆಂಕಟೇಶ್ ಎಂ.ವಿ ಆದೇಶ ಹೊರಡಿಸಿದ್ದಾರೆ.
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
- ಎನ್ಜಿಟಿಯಲ್ಲಿ ವಕೀಲರನ್ನು ನೇಮಿಸಿ ಹೋರಾಟ ಮಾಡಬೇಕು: ಆರ್.ಅಶೋಕ
- ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
ಶಿಕ್ಷಕರಾಗಿದ್ದ ಇವರು ಜಾತಿ, ಜಾತಿಗಳ ಮಧ್ಯೆ ವೈಷಮ್ಯ ಮೂಡಿಸುವುದು, ಶಾಲೆಗೆ ಗೈರು ಹಾಜರಾಗುವುದು ಮತ್ತು ರಾಜಕೀಯ ಪಕ್ಷಗಳ ಜೊತೆ ಗುರುತಿಸಿಕೊಳ್ಳುವುದು ಹಾಗೂ ಬೇರೆ ಶಿಕ್ಷಕರ ಮೇಲೆ ಒತ್ತಡ ಹೇರುವುದು, ಇವರ ಪ್ರವೃತ್ತಿಯಾಗಿರುತ್ತದೆ. ಈ ಬಗ್ಗೆ ಇವರ ಮೇಲೆ ಸಾರ್ವಜನಿಕರು ದೂರು ನೀಡಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ಬೇರೆ ತಾಲ್ಲೂಕುಗಳಿಗೆ ವರ್ಗಾವಣೆ ಮಾಡುವಂತೆ ದೂರು ಸಲ್ಲಿಕೆಯಾಗಿತ್ತು ಮತ್ತು ಈ ಶಿಕ್ಷಕರ ಮೇಲೆ ಜಗಳೂರು ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದವು.
ಇವರ ನಡತೆ ಕುರಿತು ಪೊಲೀಸ್ ಅಧೀಕ್ಷಕರು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಂದ ವರದಿ ಸಲ್ಲಿಕೆಯಾಗಿತ್ತು. ಇವರು ಕರ್ನಾಟಕ ನಾಗರಿಕ ಸೇವಾ ನಡತೆ ನಿಯಮಾವಳಿಗೆ ವಿರುದ್ದವಾಗಿ ನಡೆದುಕೊಂಡಿರುವುದು ಮೇಲ್ನೋಟಕ್ಕೆ ಕಂಡು ಬಂದಿರುವುದರಿಂದ ಸೇವೆಯಿಂದ ಅಮಾನತು ಮಾಡಿ ಆದೇಶಿಸಲಾಗಿದೆ.



