ಮಾನ್ಯ @siddaramaiah ನವರು ಮುಖ್ಯಮಂತ್ರಿ ಆದಾಗಲೆಲ್ಲ, ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗಲೆಲ್ಲ ಪ್ರಾಮಾಣಿಕ ಅಧಿಕಾರಿಗಳಿಗೆ ಕಿರುಕುಳ ಭಾಗ್ಯ, ಆತ್ಮಹತ್ಯೆ ಗ್ಯಾರೆಂಟಿ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಗ್ರಾಮೀಣಾಭಿವೃದ್ಧಿ ಇಲಾಖೆಯ ಲಂಚಕೋರತನಕ್ಕೆ ಬೇಸತ್ತು ದಾವಣಗೆರೆಯ ಗುತ್ತಿಗೆದಾರ ಪಿ.ಸಿ.ಗೌಡರ್ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣದ ತನಿಖೆ ಮುಗಿಯುವ ಮುನ್ನವೇ ಈಗ ಬೀದರ್ ಜಿಲ್ಲೆ ಭಾಲ್ಕಿ ತಾಲ್ಲೂಕಿನ ಕಟ್ಟಿತೂಗಾಂವ್ ಗ್ರಾಮದ ನಿವಾಸಿ ಸಿವಿಲ್ ಎಂಜಿನಿಯರ್ ಸಚಿನ್ ಮಾನಪ್ಪ ಪಾಂಚಾಳ್ (26) ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ @PriyankKharge ಅವರ ಆಪ್ತ, ಕಲಬುರಗಿ ಕಾಂಗ್ರೆಸ್ ಮುಖಂಡ ರಾಜು ಕಪನೂರ ಸೇರಿ ಎಂಟು ಮಂದಿ ಹಣಕ್ಕೆ ಬೇಡಿಕೆ ಇಟ್ಟು ಕೊಲೆ ಬೆದರಿಕೆ ಹಾಕಿದ್ದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಅವರು ಡೆತ್‌ನೋಟ್ ಬರೆದಿಟ್ಟಿದ್ದಾರೆ.
ಎರಡು ಪ್ರಾಮಾಣಿಕ ಗುತ್ತಿಗೆದಾರರ ಆತ್ಮಹತ್ಯೆಗೆ ಕಾರಣವಾಗಿರುವ ಸಚಿವ @PriyankKharge ಅವರು ಈ ಸಾವುಗಳಿಗೆ ನೈತಿಕ ಹೊಣೆ ಹೊತ್ತು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕು ಎಂದು ಆಗ್ರಹಿಸುತ್ತೇನೆ.
– ಆರ್ ಅಶೋಕ್ ವಿಧಾನಸಭೆ ವಿಪಕ್ಷ ನಾಯಕ




