ಎಸ್.ಎಸ್.ಎಲ್.ಸಿ. ಪರೀಕ್ಷೆ:
ದಾವಣಗೆರೆ: ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಗಳು ನಡೆಯುತ್ತಿದ್ದು ಹರಿಹರ ತಾಲ್ಲೂಕಿನ ಎಂಕೆಇಟಿಎಲ್ ಕೆ ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಪರೀಕ್ಷಾ ಕರ್ತವ್ಯದಲ್ಲಿ ನಿರ್ಲ್ಯಕ್ಷ್ಯ ವಹಿಸಿದ ಕಾರಣಕ್ಕೆ ಸೇವೆಯಿಂದ ಅಮಾನತು ಮಾಡಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್ ಆದೇಶಿಸಿದ್ದಾರೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಸಮಾಜ ವಿಜ್ಞಾನ ವಿಷಯದ ಪರೀಕ್ಷೆ ನಡೆದಿರುತ್ತದೆ. ಇವರು ಪರೀಕ್ಷಾ ಮೇಲ್ವಿಚಾರಕರಾಗಿ ಕರ್ತವ್ಯ ನಿರ್ವಹಿಸಿದ ಕೊಠಡಿಯಲ್ಲಿ ವಿದ್ಯಾರ್ಥಿಗಳು ಒಬ್ಬರಿಗೊಬ್ಬರು ಹಿಂದೆ, ಮುಂದಿನ ಬೆಂಚ್ ನ ವಿದ್ಯಾರ್ಥಿಗಳೊಂದಿಗೆ ಸಂಭಾಷಣೆಯಲ್ಲಿ ತೊಡಗಿದ್ದರೂ ಮೇಲ್ವಿಚಾರಕರಾಗಿ ಪರೀಕ್ಷಾ ಶಿಸ್ತು, ಗೋಪ್ಯತೆಯನ್ನು ಕಾಪಾಡಿಕೊಳ್ಳುವಲ್ಲಿ ವಿಫಲವಾಗಿರುವುದರಿಂದ ಅಮಾನತು ಮಾಡಲಾಗಿದೆ.
ಪ್ರತಿ ಪರೀಕ್ಷಾ ಕೇಂದ್ರದ ಕೊಠಡಿಯಲ್ಲಿ ವೆಬ್ ಕಾಸ್ಟಿಂಗ್ ಮಾಡಲಾಗಿದ್ದು, ನೇರ ದೃಶ್ಯಾವಳಿಗಳನ್ನು ಶಿಕ್ಷಣ ಇಲಾಖೆ ಆಯುಕ್ತರು ವೀಕ್ಷಣೆ ಮಾಡಿರುತ್ತಾರೆ. ಆಯುಕ್ತರು ನೀಡಿದ ನಿರ್ದೇಶನದ ಮೇರೆಗೆ ಹರಿಹರ ತಾ. ಬನ್ನಿಕೋಡು ಕರ್ನಾಟಕ ಪಬ್ಲಿಕ್ ಸ್ಕೂಲ್ ಚಿತ್ರಕಲಾ ಶಿಕ್ಷಕರಾದ ರಿಯಾಜ್ ಅಹಮದ್ ಇವರನ್ನು ಅಮಾನತು ಮಾಡಲಾಗಿದೆ.




