ಹಜ್ ಭವನ ನವೀಕರಣಕ್ಕೆ ಸಿದ್ದರಾಮಯ್ಯ 5 ಸಾವಿರ ಕೋಟಿ ನೀಡಿದ್ದಾರೆಯೇ? ಫ್ಯಾಕ್ಟ್ ಚೆಕ್

3 years ago

#Siddaramaiah #given #5thousand #crores #renovation #HajBhavan #Factcheck #zameerahamd

ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ದಿನಗಳಿಂದ “ಹಜ್ ಭವನ ನವೀಕರಣಕ್ಕೆ ಸಿಎಂ 5 ಸಾವಿರ ಕೋಟಿ ನೀಡಿದ್ದಾರೆ” ಎಂಬ ಸುದ್ದಿವಾಹಿನಿಯೊಂದರ ಸ್ಕ್ರೀನ್ ಶಾಟ್ ಹಂಚಿಕೆಯಾಗುತ್ತಿದೆ. ಇದರಲ್ಲಿ ನೂತನ ಸಂಸತ್ ಭವನ, ರಾಮಮಂದಿರ ನಿರ್ಮಾಣಕ್ಕೆ ಆಗುವ ವೆಚ್ಚಕ್ಕಿಂತ ಹೆಚ್ಚಿನ ಮೊತ್ತವನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಜ್ ಭವನ ನವೀಕರಣಕ್ಕೆ ನೀಡಿದೆ ಎಂದು ಪೋಸ್ಟ್ ಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಇದು ಶುದ್ಧ ಸುಳ್ಳು ಸುದ್ದಿ.

ಈ ವಿಷಯದ ಕುರಿತು ಪ್ರತಿಕ್ರಿಯೆ ನೀಡಿರುವ ವಸತಿ ಸಚಿವ ಜಮೀರ್ ಅಹಮದ್ ಖಾನ್, ಹಜ್‌ ಭವನ ನಿರ್ಮಾಣಕ್ಕೆ ಸಿಎಂ ಸಿದ್ದರಾಮಯ್ಯ 5000 ಕೋಟಿ ರೂ. ಕೊಟ್ಟಿರುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡಲಾಗುತ್ತಿದೆ. ಸುಳ್ಳು ಹರಡಿ ಸಮಾಜದಲ್ಲಿ ಅಶಾಂತಿ ಮೂಡಿಸಲು ಯತ್ನಿಸುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.  

Leave a Reply