ಹಾಸನ: ಕಂದಾಯ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಭೈರೇಗೌಡ ಇಂದು ಕೂಡಾ ಶ್ರೀ ಹಾಸನಾಂಬ ದೇವಿ ಜಾತ್ರಾ ಮಹೋತ್ಸವದ ವ್ಯವಸ್ಥೆಗಳ ಪರಿಶೀಲಿಸಿ ನಂತರ ಸರದಿ ಸಾಲಿನಲ್ಲಿ ಸಾಗುತ್ತಿದ್ದ ಸಾರ್ವಜನಿಕರನ್ನು ಮಾತನಾಡಿಸಿದರು. ಈ ವೇಳೆ ಪ್ರತಿಕ್ರಿಯಿಸಿದ ನಾಗರಿಕರು, ಈ ಬಾರಿ ಜಾತ್ರಾ ಮಹೋತ್ಸವವನ್ನು ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಲಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಶ್ರೀ ಹಾಸನಾಂಬ ದೇವಾಲಯದ ಆವರಣದಲ್ಲಿ ಏರ್ಪಡಿಸಿರುವ ಸಾಂಸ್ಕೃತಿಕ ವೇದಿಕೆಯಲ್ಲಿ ಮಾತನಾಡಿದ ಕೃಷ್ಣ ಬೈರೇಗೌಡ ಕಳೆದ ವರ್ಷದಲ್ಲಿ 5-6 ಗಂಟೆಗೆ ಧರ್ಮದರ್ಶನ ಮಾಡಬೇಕಾದ ಪರಿಸ್ಥಿತಿ ಇತ್ತು. ಆದರೆ ಇಂದು 01 ರಿಂದ 1.30 ಗಂಟೆಗೆ ಸುಗಮವಾಗಿ ಸುಲಲಿತವಾಗಿ ದರ್ಶನ ಮಾಡಲು ಅವಕಾಶ ಕಲ್ಪಿಸಿಕೊಡಲಾಗಿದೆ ಎಂದರು.
ನಾಡಿನ ವಿವಿಧ ಭಾಗಗಳಿಂದ ಕಲಾವಿದರನ್ನು ಕರೆಸಿ ಅವರಿಗೆ ಪ್ರೋತ್ಸಾಹ ನೀಡುವುದರ ಜೊತೆಗೆ ಭಕ್ತಾದಿಗಳಿಗೆ ಜಾನಪದ ಕಲೆ, ಸುಗಮ ಸಂಗೀತದ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಾಸನಾಂಬ ಕಲಾಕ್ಷೇತ್ರ ಸೇರಿದಂತೆ ವಿವಿಧ ಭಾಗಗಳಲ್ಲಿ ಆಯೋಜಿಸಲಾಗಿದೆ. ಆ ಕಾರ್ಯಕ್ರಮಗಳಲ್ಲಿ ಎಲ್ಲರೂ ಭಾಗವಹಿಸಿ ಎಂದು ಮನವಿ ಮಾಡಿದರು.
ಈ ವೇಳೆಯಲ್ಲಿ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರು ಹಾಗೂ ಶಾಸಕ ಕೆ.ಎಂ.ಶಿವಲಿಂಗೇಗೌಡ, ಸಂಸದ ಶ್ರೇಯಸ್ ಎಂ ಪಟೇಲ್, ಜಿಲ್ಲಾಧಿಕಾರಿ ಕೆ.ಎಸ್ ಲತಾ ಕುಮಾರಿ, ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿ ಮೊಹಮ್ಮದ್ ಸುಜೀತಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪೂರ್ಣಿಮಾ ಬಿ.ಆರ್, ಉಪ ವಿಭಾಗಾಧಿಕಾರಿ ಹಾಗೂ ಹಾಸನಾಂಬ ದೇವಾಲಯದ ಆಡಳಿತಾಧಿಕಾರಿ ಮಾರುತಿ ಮತ್ತಿತರರು ಉಪಸ್ಥಿತರಿದ್ದರು.






