ಎಚ್.ಡಿ.ಕುಮಾರಸ್ವಾಮಿ ಖಾಸಗಿ ಆಸ್ಪತ್ರೆಗೆ ದಾಖಲು

3 years ago

HD Kumaraswamy was admitted to a private hospital

ಬೆಂಗಳೂರು: ಸತತ ಪ್ರವಾಸ ಹಾಗೂ ರಾಜಕೀಯ ಚಟುವಟಿಕೆಗಳಿಂದ ಬಳಲಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಖಾಸಗಿ ಆಸ್ಪತ್ರೆಗೆ   ದಾಖಲಾಗಿದ್ದಾರೆ.

ಕಳೆದ ಎರಡು ದಿನಗಳಿಂದ ನಿರಂತರ ಪ್ರಯಾಣ ಮಾಡಿದ್ದರಿಂದ ಆಯಾಸವಾಗಿ ಸುಸ್ತು, ಜ್ವರ ಕಾಣಿಸಿಕೊಂಡಿದ್ದರಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.‌ ಅವರ ದೇಹ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಲಾಗಿದೆ.

ಅತಿಯಾದ ಬಳಲಿಕೆ, ಸುಸ್ತು ಮತ್ತು ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದೆ.

ಚನ್ನಪಟ್ಟಣ, ಮೈಸೂರು, ನಾಗಮಂಗಲ, ತುರುವೇಕೆರೆ ಸೇರಿದಂತೆ ವಿವಿಧೆಡೆ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ನಿರಂತರ ಪ್ರಯಾಣ ಮಾಡಿದ್ದ ಕುಮಾರಸ್ವಾಮಿ ಅವರಿಗೆ ಆಯಾಸ ಉಂಟಾಗಿತ್ತು. ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Leave a Reply