ಬೆಂಗಳೂರು: ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಮಾಜಿ ಸಚಿವ ರೇವಣ್ಣ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಿಂದ ನೇರವಾಗಿ ಮಾಜಿ ಪ್ರಧಾನಿ ದೇವೇಗೌಡ ನಿವಾಸಕ್ಕೆ ಆಗಮಿಸಿದರು.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ರೇವಣ್ಣ ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ, ಪರಪ್ಪನ ಅಗ್ರಹಾರ ಕಾರಾಗೃಹದ ಮುಂದೆ ಜಮಾಯಿಸಿದ್ದ ಅವರ ಅಭಿಮಾನಿಗಳು ಜಯ ಘೋಷಣೆ ಹಾಕಿ ಸಂಭ್ರಮಿಸಿದರು. ಈ ವೇಳೆ ಕಾರ್ಯಕರ್ತರು ಮತ್ತು ಅಭಿಮಾನಿಗಳನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದರು.
ಮನೆಗೆ ಆಗಮಿಸಿದ ರೇವಣ್ಣ ತಂದೆ ತಾಯಿಯ ಪಾದಕ್ಕೆ ನಮಿಸಿ ಒಳ ಪ್ರವೇಶಿಸಿದರು. ಬಳಿಕ ಮನೆಯಲ್ಲಿನ ದೇವರ ಕೋಣೆಯಲ್ಲಿ ಸುದೀರ್ಘ ಹೊತ್ತು ಪೂಜೆಯಲ್ಲಿ ನಿರತರಾದರು. ಬಳಿಕ ಕುಟುಂಬ ಸದಸ್ಯರೊಂದಿಗೆ ಕೆಲ ಕಾಲ ಮಾತನಾಡಿದ ಅವರು ನಂತರ ಪಕ್ಷದ ಕೆಲವು ಶಾಸಕರು ಮತ್ತು ಪ್ರಮುಖ ನಾಯಕರೊಂದಿಗೆ ಮಾತುಕತೆ ನಡೆಸಿದರು.
ನಂತರ ರೇವಣ್ಣ ಬೆಂಗಳೂರಿನ ಜೆಪಿ ನಗರದಲ್ಲಿರುವ ತಿರುಮಲ ಲಕ್ಷ್ಮಿ ವೆಂಕಟೇಶ್ವರ ದೇವಾಲಯಕ್ಕೆ ಆಗಮಿಸಿ ವಿಶೇಷ ಪೂಜೆಯಲ್ಲಿ ಭಾಗಿಯಾಗಿದರು. ದೇವಾಲಯದಲ್ಲಿ ಕುಂಬಳಕಾಯಿ, ಈಡುಗಾಯಿ ದೃಷ್ಟಿ ತೆಗೆಸಿ ರೇವಣ್ಣ ಒಬ್ಬರೇ ಪೂಜೆ ಮಾಡಿದರು. ಇಲ್ಲಿಂದ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿದರು. ಶೃಂಗೇರಿಗೆ ಕೂಡ ಭೇಟಿ ನೀಡುವ ಸಾಧ್ಯತೆಯಿದೆ.



