ಬೆಂಗಳೂರು: ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸುವ ವಿಚಾರದಲ್ಲಿ ಬಿಜೆಪಿ ನಾಯಕರ ವಿರುದ್ಧ ಅಸಮಾಧಾನಗೊಂಡಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ಸಂಧಾನ ಮಾತುಕತೆ ನಡೆಸಿದರು.
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
- ಮ್ಯಾಥ್ಎರಾ ಟೆಕ್ ಪ್ರೈವೇಟ್ ಲಿಮಿಟೆಡ್ ನಿಂದ ಪದವೀಧರರಿಗೆ ಉದ್ಯೋಗಾವಕಾಶ
ವರಿಷ್ಠರ ಸೂಚನೆ ಮೇರೆಗೆ ಕುಮಾರಸ್ವಾಮಿ ಜೊತೆ ಮಾತುಕತೆ ನಡೆಸಿದ ಅವರು, ಉಭಯ ಪಕ್ಷಗಳ ನಡುವೆ ಉಂಟಾಗಿರುವ ಬಿಕ್ಕಟ್ಟು ಬಗೆಹರಿಸುವ ಸಂಬಂಧ ಕೈಗೊಳ್ಳಬೇಕಾಗಿರುವ ನಿರ್ಧಾರಗಳ ಕುರಿತು ಗೃಹ ಸಚಿವ ಅಮಿತ್ ಶಾ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಕುಮಾರಸ್ವಾಮಿ ಅವರಿಗೆ ಸಮಜಾಯಿಷಿ ನೀಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರವನ್ನು ಮಣಿಸುವ ದೃಷ್ಟಿಯಿಂದ ಉಭಯ ಪಕ್ಷಗಳು ಜಂಟಿಯಾಗಿ ಹೋರಾಟ ಮಾಡುವ ಅಗತ್ಯವಿದೆ. ಇಂತಹ ಸಮಯದಲ್ಲಿ ರಾಜ್ಯದ ಕೆಲವು ನಾಯಕರ ತೀರ್ಮಾನ ಸಂಘಟಿತ ಹೋರಾಟಕ್ಕೆ ಅಡ್ಡಿ ಮಾಡಬಾರದು ಎಂದು ಕುಮಾರಸ್ವಾಮಿ ಹೇಳಿದರು ಎನ್ನಲಾಗಿದೆ.
ಅಂತಿಮವಾಗಿ ಕುಮಾರಸ್ವಾಮಿ ಜೋಶಿ ಅವರು ಮಾಡಿದ ಸಂಧಾನಕ್ಕೆ ಮಣಿದಿದ್ದು ಉದ್ದೇಶಿತ ಪಾದಯಾತ್ರೆಯಿಂದ ಹಾಸನದ ಮಾಜಿ ಶಾಸಕ ಪ್ರೀತಮ್ ಗೌಡ ಅವರನ್ನು ಹೊರಗಿಟ್ಟಿದ್ದೆ ಆದಲ್ಲಿ ತಮ್ಮ ಪಕ್ಷದ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವ ಕುರಿತಂತೆ ಮರುಚಿಂತನೆ ಮಾಡಲಿದ್ದಾರೆ ಎಂದು ಹೇಳಿರುವುದಾಗಿ ಗೊತ್ತಾಗಿದೆ.
ಸಭೆಯ ನಂತರ ರಾಜ್ಯ ಬಿಜೆಪಿ ಉಸ್ತುವಾರಿ ನಾಯಕ ರಾಧಾ ಮೋಹನ್ ಸಿಂಗ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಾಯಕರ ಸಭೆ ನಡೆಯಿತು. ಸಭೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪಾದಯಾತ್ರೆ ಮತ್ತು ಸಂಘಟಿತ ಹೋರಾಟ ನಡೆಸಲು ತೀರ್ಮಾನ ಕೈಗೊಳ್ಳಲಾಯಿತು.
ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯ ಅಧ್ಯಕ್ಷ ವಿಜಯೇಂದ್ರ, ಈಗಾಗಲೇ ತೀರ್ಮಾನಿಸಿರುವಂತೆ ಮುಡಾ ಹಗರಣ ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ವರ್ಗಾವಣೆ ಅಕ್ರಮದ ವಿರುದ್ಧ ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ನಡೆಯಲಿದೆ ಎಂದರು.
ಉಭಯ ಪಕ್ಷಗಳ ನಾಯಕರು ಈ ಹಿಂದೆ ತೀರ್ಮಾನಿಸಿರುವಂತೆ ಆಗಸ್ಟ್ ಮೂರರ ಶನಿವಾರ ಬೆಂಗಳೂರಿನಿಂದ ಪಾದಯಾತ್ರೆ ಆರಂಭವಾಗಲಿದ್ದು, ಅದಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಚಾಲನೆ ನೀಡಲಿದ್ದಾರೆ ಎಂದರು.



