ಬೆಂಗಳೂರು: ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನಲ್ಲಿ ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್‌ಗೆ 550 ಎಕರೆ ಭೂಮಿಯನ್ನು ಗಣಿ ಗುತ್ತಿಗೆ ನೀಡಿರುವ ಪ್ರಕರಣದಲ್ಲಿ ವಿಶೇಷ ನ್ಯಾಯಾಲಯ ಮಂಜೂರು ಮಾಡಿರುವ ನಿರೀಕ್ಷಣಾ ಜಾಮೀನು ಪ್ರಶ್ನಿಸಿ ಲೋಕಾಯುಕ್ತ ವಿಶೇಷ ತನಿಖಾ ದಳ ಸಲ್ಲಿಸಿರುವ ಅರ್ಜಿಯನ್ನು ಅಮಾನತುಗೊಳಿಸಬೇಕು ಎಂದು ಕೋರಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
- ಈ ದೇಶ ಕಟ್ಟಿದ್ದೇ ದಲಿತರು, ನೀಲಿ ಶಾಲು ಬಗ್ಗೆ ಮಾತಾಡೋಕೆ ನೀನ್ಯಾವನೋ?
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
ಈ ಕುರಿರು ಕುಮಾರಸ್ವಾಮಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು. ಕುಮಾರಸ್ವಾಮಿ ಪರ ಹಾಜರಿದ್ದ ಪದಾಂಕಿತ ಹಿರಿಯ ವಕೀಲ ಹಷ್ಮತ್ ಪಾಷಾ ಅವರ ಕೋರಿಕೆಯ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಮುಂದೂಡಲಾಗಿದೆ.
ಲೋಕಾಯುಕ್ತ ಪರ ಹಾಜರಿದ್ದ ವೆಂಕಟೇಶ್ ಅರಬಟ್ಟಿ, ವಿಶೇಷ ನ್ಯಾಯಾಲಯ ತಮ್ಮ ನಿರೀಕ್ಷಣಾ ಜಾಮೀನು ಅರ್ಜಿ ನಿರ್ಧರಿಸುವುದನ್ನು ವಿಳಂಬಗೊಳಿಸುವ ಉದ್ದೇಶದಿಂದ ಕುಮಾರಸ್ವಾಮಿ ಈ ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ, ಈ ಅರ್ಜಿ ಊರ್ಜಿತವಾಗುವುದಿಲ್ಲ. ಆದ್ದರಿಂದ, ಇದನ್ನು ವಜಾಗೊಳಿಸಬೇಕು ಎಂದು ನ್ಯಾಯಪೀಠಕ್ಕೆ ಮನವಿ ಸಲ್ಲಿಸಿದರು.




