ಹೈದರಾಬಾದ್: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತೆಲಂಗಾಣದ ಪೌರಾಡಳಿತ ಹಾಗೂ ನಗರಾಭಿವೃದ್ಧಿ ಖಾತೆ ಸಚಿವ ಕೆ.ಟಿ.ರಾಮರಾವ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಉಭಯ ನಾಯಕರು ಉಪಾಹಾರ ಸೇವಿಸಿದ ನಂತರ ತೆಲಂಗಾಣ, ಕರ್ನಾಟಕ ಸೇರಿದಂತೆ ರಾಷ್ಟ್ರ ರಾಜಕಾರಣದ ಬಗ್ಗೆ ಕೆಲಹೊತ್ತು ಚರ್ಚಿಸಿದರು.
ಇಂದು ಮಧ್ಯಾಹ್ನ ತೆಲಂಗಾಣ ಸಿಎಂ ಕೆ.ಚಂದ್ರಶೇಖರ್ ರಾವ್ ಅವರೊಂದಿಗೆ ಕುಮಾರಸ್ವಾಮಿಯವರು ಮಾತುಕತೆ ನಡೆಸಲಿದ್ದಾರೆ.




