ಸೆ. 14ರಂದು ಹಿಂದಿ ದಿವಸ ಆಚರಿಸುವುದು ಕನ್ನಡಿಗರಿಗೆ ಮಾಡುವ ಅನ್ಯಾಯ: ಎಚ್.ಡಿ.ಕುಮಾರಸ್ವಾಮಿ

4 years ago

ಬೆಂಗಳೂರು: ಭಾರತವು ಸಾವಿರಾರು ಭಾಷೆ ಹಾಗೂ ಉಪ ಭಾಷೆಗಳನ್ನು ಒಳಗೊಂಡ, 560 ಕ್ಕೂ ಹೆಚ್ಚು ಸಂಸ್ಥಾನಗಳು ಒಪ್ಪಿ ಸೇರಿದ ಮತ್ತು ಸಾಮಾಜಿಕ, ಸಾಂಸ್ಕೃತಿಕವಾಗಿ ಭಿನ್ನ ಆಚರಣೆಗಳನ್ನು ಹೊಂದಿರುವ ಒಂದು ಮಹಾನ್ ಒಕ್ಕೂಟವಾಗಿದೆ. ಇಂತಹ ನಾಡಿನಲ್ಲಿ ಕೇವಲ ಒಂದು ಭಾಷೆಯನ್ನು ಮಾತ್ರವೇ ಮೆರೆಸುವುದು ನಿಜಕ್ಕೂ ಜನತೆಗೆ ಎಸಗುವ ಪರಮ ಅನ್ಯಾಯವಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಪತ್ರ ಬರೆದಿದ್ದಾರೆ.

ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಹಿಂದಿ ದಿವಸ್ ಆಚರಣೆಗೆ ಮುಂದಾಗಿರುವ ಹಿನ್ನೆಲೆಯಲ್ಲಿ ಪತ್ರ ಬರೆದಿರುವ ಎಚ್.ಡಿ.ಕುಮಾರಸ್ವಾಮಿ, ಸೆಪ್ಟೆಂಬರ್ 14 ರಂದು ಭಾರತ ಒಕ್ಕೂಟ ಸರ್ಕಾರದ ಪ್ರಾಯೋಜಿತ ಕಾರ್ಯಕ್ರಮವಾದ “ಹಿಂದಿ ದಿವಸ”ವನ್ನು ಕರ್ನಾಟಕದಲ್ಲಿ ಒತ್ತಾಯಪೂರ್ವಕವಾಗಿ ಆಚರಿಸುವುದು ರಾಜ್ಯ ಸರ್ಕಾರ ಕನ್ನಡಿಗರಿಗೆ ಮಾಡುವ ಅನ್ಯಾಯವಾಗಿದೆ. ಕರ್ನಾಟಕ ಸರ್ಕಾರದ ವತಿಯಿಂದ, ನಮ್ಮ ರಾಜ್ಯದ ಜನತೆಯ ತೆರಿಗೆ ಹಣದಲ್ಲಿ ಯಾವುದೇ ಕಾರಣಕ್ಕು ರಾಜ್ಯ ಸರ್ಕಾರ ಹಿಂದಿ ದಿವಸ ಆಚರಣೆ ಮಾಡಬಾರದು ಎಂದು ಅವರು ಆಗ್ರಹಿಸಿದ್ದಾರೆ.

Leave a Reply