ದಾವಣಗೆರೆ: ಇಂದಿನ ಆಧುನಿಕ ಜೀವನಶೈಲಿಯಲ್ಲಿ ಹೃದಯ, ನರ ಮತ್ತು ಕ್ಯಾನ್ಸರ್ ಸೇರಿದಂತೆ ಗಂಭೀರ ಕಾಯಿಲೆಗಳು ಹೆಚ್ಚುತ್ತಿರುವುದರಿಂದ ಆರೋಗ್ಯದ ಬಗ್ಗೆ ಜಾಗೃತಿ ಅತ್ಯಂತ ಅಗತ್ಯವಾಗಿದೆ ಎಂದು ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ತಿಳಿಸಿದರು.
- ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಫೇಕುಗಳ ಕಾಟ!
- ಇತಿಹಾಸದಲ್ಲೇ ದಾಖಲೆ ಬರೆಯುವಂತೆ ಬಸ್ ಟಿಕೆಟ್ ದರ ಏರಿಕೆ: ಆರ್ ಅಶೋಕ್
- ನವೆಂಬರ್ 07 ರಿಂದ ಎರಡನೇ ಹಂತದ ‘ವಾರ್ಡ್ ಒನ್’ ಅಭಿಯಾನ
- ಆ್ಯಕ್ಸಿಡೆಂಟಲ್ ಸಿಎಂ ಬೊಮ್ಮಾಯಿ ಅವರೇ ಹಾವೇರಿ ಕ್ಷೇತ್ರದ ಬಗ್ಗೆ ಗಮನ ಕೊಡಿ: ಬಿ ಕೆ ಹರಿಪ್ರಸಾದ್
- 40 ದಾಟಿದ ಪುರುಷರ ಮನಸ್ಸನ್ನು ಅರ್ಥಮಾಡಿಕೊಳ್ಳುವುದು ಹೇಗೆ?
ದಾವಣಗೆರೆಯಲ್ಲಿ ನೂರುಲ್ಲಾ ಅಭಿಮಾನಿಗಳ ಬಳಗದ ವತಿಯಿಂದ, ಆರ್ ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಸಪ್ತಗಿರಿ ಆಸ್ಪತ್ರೆಯ ಸಹಯೋಗದಲ್ಲಿ ಆಯೋಜಿಸಲಾದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಸಮಯಕ್ಕೆ ಸರಿಯಾಗಿ ತಪಾಸಣೆ ಮಾಡಿಸಿಕೊಂಡರೆ ಅನೇಕ ಕಾಯಿಲೆಗಳನ್ನು ತಡೆಗಟ್ಟಬಹುದು ಎಂದರು.
ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಉಚಿತವಾಗಿ ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸೆ ಸೌಲಭ್ಯ ಒದಗಿಸುವ ಇಂತಹ ಶಿಬಿರಗಳು ಸಮಾಜಕ್ಕೆ ಅತ್ಯಂತ ಉಪಯುಕ್ತವಾಗಿವೆ. ವಿಶೇಷವಾಗಿ BPL ಹಾಗೂ ಅಂತ್ಯೋದಯ ಕಾರ್ಡ್ ಹೊಂದಿರುವವರಿಗೆ ಉಚಿತ ಚಿಕಿತ್ಸೆ ಮತ್ತು ಅಗತ್ಯವಿದ್ದರೆ ಶಸ್ತ್ರಚಿಕಿತ್ಸೆಗೆ ಸಹಾಯ ನೀಡುತ್ತಿರುವುದು ಶ್ಲಾಘನೀಯವಾಗಿದೆ ಎಂದರು.
ಈ ಜನಪರ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿದ ನೂರುಲ್ಲಾ ಅಭಿಮಾನಿಗಳ ಬಳಗ, ವೈದ್ಯರು ಮತ್ತು ಸ್ವಯಂಸೇವಕರಿಗೆ ಅಭಿನಂದನೆಗಳನ್ನು ತಿಳಿಸಿ, ಇಂತಹ ಸೇವಾ ಕಾರ್ಯಗಳು ಇನ್ನಷ್ಟು ವಿಸ್ತಾರವಾಗಿ ಸಾವಿರಾರು ಜನರಿಗೆ ನೆರವಾಗಲಿ ಎಂದು ಹಾರೈಸಿದರು. ಸಾರ್ವಜನಿಕರು ಇಂತಹ ಶಿಬಿರಗಳ ಸದುಪಯೋಗ ಪಡೆದುಕೊಂಡು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಎಸ್‌ಡಿಪಿಐ ದಾವಣಗೆರೆ ಜಿಲ್ಲಾಧ್ಯಕ್ಷ ಎ.ಆರ್.ತಾಹೀರ್ ಹುಸೇನ್, ಸಮಾಜ ಸೇವಕರಾದ ದಾದಾಪೀರ್ ದೊಡ್ಡ ಮನೆ, ಮಹಾನಾಯಕ ಅಂಬೇಡ್ಕರ್ ಸೇನೆ ಯುವ ಘಟಕದ ರಾಜ್ಯಾಧ್ಯಕ್ಷ ನೂರುಲ್ಲಾ, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷೆ ಹಾಗೂ ಅಕ್ಕಾ ಪಡೆಯ ಸದಸ್ಯೆ ತಹಸೀನಾ ಬಾನು, ಬಾಬು ಸೇರಿದಂತೆ ಹಲವಾರು ಗಣ್ಯರು ಹಾಜರಿದ್ದರು.




