ಜನರ ಆರೋಗ್ಯ ಸುರಕ್ಷತೆಗೆ ಆರೋಗ್ಯ ಇಲಾಖೆ ಸಹಕಾರ: ದಿನೇಶ್ ಗುಂಡೂರಾವ್

2 years ago

ಮಹಾಲಕ್ಷ್ಮಿಲೇಔಟ್ ವಿಧಾನಸಭಾ ಕಾಂಗ್ರೆಸ್ ಸಮಿತಿ:ಉಚಿತ ಆರೋಗ್ಯ ತಪಾಸಣೆ

ಬೆಂಗಳೂರು: ಮನುಷ್ಯರು ಆರೋಗ್ಯವಂತರಾಗಿ ಇರಲು ಆರೋಗ್ಯ ತಪಾಸಣೆ ಅವಶ್ಯಕತೆ ಇದೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಹೇಳಿದರು.

ಮಹಾಲಕ್ಷ್ಮಿಲೇಔಟ್ ವಿಧಾನಸಭಾ ಕಾಂಗ್ರೆಸ್ ಪಕ್ಷ ಮತ್ತು ರಾಜೀವ್ ಗಾಂಧಿ ಅಭಿಮಾನಿಗಳ ವೇದಿಕೆ ವತಿಯಿಂದ ಕುರುಬರಹಳ್ಳಿ ಬಯಲು ರಂಗ ಮಂದಿರದಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಉಚಿತ ರಕ್ತ ಪರೀಕ್ಷೆ ಶಿಬಿರದಲ್ಲಿ ಮಾತಾಡಿದ ಅವರು, ಜನ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳುವುದಿಲ್ಲ. ಭಯಪಡದೇ ವೈದ್ಯಕೀಯ ತಪಾಸಣೆ ಸಕಾಲಕ್ಕೆ ಮಾಡಿಕೊಂಡು ನ್ಯೂನ್ಯತೆ ಇದ್ದರೆ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದರು.

ಕ್ಯಾನ್ಸರ್ ತಪಾಸಣೆ ಮಾಡಿಕೊಳ್ಳುವುದು ಉತ್ತಮ. ಮಹಿಳೆಯರಿಗೆ ಸ್ತನ ಮತ್ತು ಓರಲ್ ಕ್ಯಾನ್ಸರ್ ಉಚಿತ ತಪಾಸಣೆ ಮಾಡಿಸಕೊಳ್ಳಲು ಆರೋಗ್ಯ ಇಲಾಖೆ ಸಹಕಾರ ನೀಡಲಾಗುವುದು. ಮೊದಲನೇ ಹಂತದಲ್ಲಿ ಕ್ಯಾನ್ಸರ್ ತಪಾಸಣೆ ಪತ್ತೆ ಮಾಡಿದಲ್ಲಿ ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ಸಿಗುತ್ತದೆ ಎಂದರು.

5 ಗ್ಯಾರಂಟಿ ಯೋಜನೆ ಜನರಿಗೆ ಸಹಕಾರಿಯಾಗಿದೆ. ಆಶಾಕಿರಣ ಕಾರ್ಯಕ್ರಮ ಯೋಜನೆ ಜಾರಿಗೆ ತರಲಾಗುತ್ತಿದೆ. 1 ಕೋಟಿ ಜನರಿಗೆ ತಪಾಸಣೆ ಮಾಡಲಾಗಿದೆ. ಕರ್ನಾಟಕದಲ್ಲಿ ಸಮಸ್ತ ಜನರಿಗೆ ಕಣ್ಣಿನ ತಪಾಸಣೆ ಮಾಡಿ ಕನ್ನಡಕ ವಿತರಿಸಲಾಗುತ್ತದೆ. ಉಚಿತ ಆರೋಗ್ಯ ತಪಾಸಣೆ ಶಿಬಿರಗಳಿಗೆ ಆರೋಗ್ಯ ಇಲಾಖೆ ಸಂಪೂರ್ಣ ನೀಡಲಾಗುವುದು ಎಂದರು.

ಸಲೀಮ್ ಅಹಮದ್ ಮಾತನಾಡಿ ,ಕಾಂಗ್ರೆಸ್ ಪಕ್ಷದ ಸರ್ಕಾರ 9 ತಿಂಗಳಲ್ಲಿ ಜನರ ವಿಶ್ವಾಸಗಳಿಸಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 5 ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೆ ತಂದಿದೆ. ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ಸಿದ್ಧಾಂತದ ಮೇಲೆ ಸರ್ಕಾರ ನಡೆಯುತ್ತಿದೆ ಎಂದರು.

ಎಸ್.ಕೇಶವಮೂರ್ತಿ ಮಾತನಾಡಿ, ಮಾಜಿ ಮುಖ್ಯಮಂತ್ರಿಗಳಾದ ಆರ್.ಗುಂಡೂರಾವ್ ಅವರ ಕುಟುಂಬದ ಆಶೀರ್ವಾದ ನನ್ನ ಮೇಲಿದೆ ಮತ್ತು ಬಡವರಿಗೆ ಉತ್ತಮ ಆರೋಗ್ಯ ಸೇವೆ ಲಭಿಸಬೇಕು ಎಂದು ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗಿದೆ. ಮಹಾಲಕ್ಷ್ಮಿಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಪ್ರತಿ ಕುಟುಂಬಗಳಿಗೆ ತಲುಪಿಸಲಾಗಿದೆ ಎಂದರು.

ಎಮ್.ಶಿವರಾಜು ಮಾತನಾಡಿ, ನಮ್ಮ ವಾರ್ಡ್, ನಮ್ಮ ಜನ ಆರೋಗ್ಯವಂತರಾಗಿ ಇರಬೇಕು ಎಂದು ಉದ್ದೇಶದಿಂದ ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾಂಗ್ರೆಸ್ ಪಕ್ಷದ ಸರ್ಕಾರ ಜನರ ಆರೋಗ್ಯದ ಹಿತರಕ್ಷಣೆ ಹಲವಾರು ಯೋಜನೆಗಳನ್ನು ರೂಪಿಸಿದೆ ಎಂದರು.

ಹೆಚ್.ಎಸ್.ಮಂಜುನಾಥಗೌಡ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದ ಜನತೆ ಬಹಳ ಸಂತೋಷದಿಂದ ಇದ್ದಾರೆ. ಆರೋಗ್ಯ ಎಲ್ಲರಿಗೂ ಮುಖ್ಯ, ರಾಜ್ಯ ಸರ್ಕಾರ ಆರೋಗ್ಯ ಕ್ಷೇತ್ರದಲ್ಲಿ ಮಹತ್ವಪೂರ್ಣ ಯೋಜನೆ ಜಾರಿಗೆ ತಂದು ಸಾಮಾನ್ಯ ಜನರಿಗೆ ಉಚಿತವಾಗಿ ಆರೋಗ್ಯ ಸೇವೆ ನೀಡುತ್ತಿದೆ ಎಂದರು.

ಹೆಚ್.ಎಸ್.ಮಂಜುನಾಥಗೌಡ, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಪರಿಸರ ರಾಮಕೃಷ್ಣ, ಎಂ.ಜಿ.ಸುಧೀಂದ್ರ, ನಟರಾಜ್ ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.

Leave a Reply