ಬೆಂಗಳೂರು: ಮಲ್ಲೇಶ್ವರದ ಕೆ.ಸಿ.ಜನರಲ್ ಆಸ್ಪತ್ರೆ ಆವರಣದಲ್ಲಿ ಒಟ್ಟು 12.28 ಕೋಟಿ ವೆಚ್ಚದಲ್ಲಿ ಸ್ಥಾಪಿಸಲಾಗಿರುವ ಜಯದೇವ ಹೃದ್ರೋಗ ಸಂಸ್ಥೆಯ 50 ಹಾಸಿಗೆ ಸಾಮರ್ಥ್ಯದ ಉಪಕೇಂದ್ರ ಹಾಗೂ ಮಕ್ಕಳ ತೀವ್ರ ನಿಗಾ ಘಟಕವನ್ನು ಸಿಎಂ Basavaraj Bommai ಲೋಕಾರ್ಪಣೆ ಮಾಡಿದರು.
ಇಸಿಜಿ, ಎಕೋ, ಟಿಎಂಟಿ, ಕ್ಯಾತ್ ಲ್ಯಾಬ್,ಸೇರಿದಂತೆ ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡಿರುವ ಈ ಉಪಕೇಂದ್ರದಿಂದ ಜಯದೇವ ಹೃದ್ರೋಗ ಸಂಸ್ಥೆಯ ಮೇಲಿನ ಒತ್ತಡ ಕಡಿಮೆ ಮಾಡುವುದರ ಜೊತೆಗೆ ಈ ಭಾಗದ ಜನರಿಗೆ ಸಮೀಪದಲ್ಲೇ ಉತ್ಕೃಷ್ಟ ಗುಣಮಟ್ಟದ ಹೃದ್ರೋಗ ಚಿಕಿತ್ಸೆ ದೊರಕಲು ಸಹಾಯಕವಾಗಲಿದೆ.
ಸಚಿವರಾದ Dr. Ashwath Narayan, ಶಾಸಕರಾದ Dinesh Gundu Rao, ಜಯದೇವ ಸಂಸ್ಥೆಯ ಮುಖ್ಯಸ್ಥ ಡಾ.ಸಿ.ಎನ್.ಮಂಜುನಾಥ್ ಮತ್ತಿತರ ಗಣ್ಯರು ಹಾಜರಿದ್ದರು.




