ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ಹೇಳಿಕೆ
ದಾವಣಗೆರೆ: ಕಲಬೆರೆಕೆ ರಹಿತ ಮತ್ತು ಆರೋಗ್ಯವಂತರಾಗಿರಲು ಸಿರಿಧಾನ್ಯದಿಂದ ತಯಾರಿಸಿದ ಆಹಾರವನ್ನು ನಮ್ಮ ದೈನಂದಿನ ಉಪಹಾರ, ಊಟದ ಪದ್ಧತಿಯಲ್ಲಿ ಅಳವಡಿಸಿಕೊಳ್ಳುವುದರಿಂದ ಆರೋಗ್ಯವಂತರಾಗಿ ಬದುಕಬಹುದೆಂದು ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್ ತಿಳಿಸಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ಕೃಷಿಕ ಸಮಾಜ, ಕೃಷಿ ಪರಿಕರ ಮಾರಾಟಗಾರರ ಸಂಘ, ತರಳಬಾಳು ಕೃಷಿ ವಿಜ್ಞಾನ ಕೇಂದ್ರ, ಇತರೆ ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಿಲಾಗಿದ್ದ ಸಿರಿಧಾನ್ಯ ಮತ್ತು ಸಾವಯವ ಅಂತರಾಷ್ಟ್ರೀಯ ವಾಣಿಜ್ಯ ಮೇಳ – 2025 ರ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ಸಿರಿಧಾನ್ಯ ನಡಿಗೆ ಆರೋಗ್ಯದ ಕಡೆಗೆ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಸಿರಿಧಾನ್ಯಗಳಾದ ನವಣೆ, ಹಾರಕ, ಊದಲು, ಕೊರಲೆ, ಸಾಮೆ, ಬರಗು ಬಳಕೆಯಿಂದಾಗುವ ಮಹತ್ವ ಕುರಿತು ಜಾಗೃತಿ ಹೆಚ್ಚಿದ್ದು ಸಿರಿಧಾನ್ಯ ಬಳಕೆಯೂ ಕೂಡ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರ ವಿವಿಧ ಕಾರ್ಯಕ್ರಮಗಳ ಮುಖಾಂತರ ರೈತರಿಗೆ ಸಿರಿಧಾನ್ಯಗಳನ್ನು ಬೆಳೆಯಲು ಉತ್ತೇಜಿಸುತ್ತಿದೆ ಎಂದರು.
ಸಿರಿಧಾನ್ಯಗಳಿಂದ ವಿವಿಧ ಖಾದ್ಯಗಳನ್ನು ತಯಾರಿಸುವ ಕುರಿತು ಜಾಗೃತಿ ಮೂಡಿಸಲು ಸಿರಿಧಾನ್ಯ ಪಾಕಸ್ಪರ್ಧೆ, ಸಿರಿಧಾನ್ಯ ಜಾಥಾ ಹಾಗೂ ಇದೇ ಜನವರಿ 23 ರಿಂದ 25 ರವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಂತರಾಷ್ಟ್ರೀಯ ವಾಣಿಜ್ಯ ಮೇಳ, ಸಾವಯವ ಮತ್ತು ಸಿರಿಧಾನ್ಯ ಮೇಳವನ್ನು ಆಯೋಜಿಸಲಾಗಿದ್ದು, ನಾವೆಲ್ಲರೂ ಇದರ ಸದುಪಯೋಗವನ್ನು ಪಡೆದುಕೊಳ್ಳೋಣ ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ ಮಾತಾನಾಡಿ, ಇತ್ತೀಚಿಗೆ ಜಂಕ್ ಫುಡ್ ಉಪಯೋಗಿಸುವುದರಿಂದ ಚಿಕ್ಕ ವಯಸ್ಸಿನಲ್ಲಿಯೇ ಆರೋಗ್ಯ ಕೆಡುತ್ತಲಿದೆ. ಸಿರಿಧಾನ್ಯಗಳ ಬಳಕೆಯಿಂದ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು. ಇದರ ಬೆಳೆಯನ್ನು ಸಹ ಅತಿ ಕಡಿಮೆ ವೆಚ್ಚದಲ್ಲಿ ಬೆಳೆಯಬಹುದಾಗಿದ್ದು, ಬೆಳೆದಂತಹ ರೈತರಿಗೆ ಸಹಾಯಧನವನ್ನು ನೀಡಲಾಗುತ್ತಿದೆ ಎಂದರು.
ಸಿರಿಧಾನ್ಯ ನಡಿಗೆ ಜಾಥಾ ನಗರದ ಜಯದೇವ ವೃತ್ತದಿಂದ ಪ್ರಾರಂಭವಾಗಿ ಪಿ.ಬಿ. ರಸ್ತೆ ಮುಖಾಂತರ, ಎ.ವಿ.ಕೆ. ಕಾಲೇಜು ರಸ್ತೆ, ರಾಂ& ಕೋ ವೃತ್ತ, ಚರ್ಚ್‍ರಸ್ತೆ ಮೂಲಕವಾಗಿ ಸಾಗಿ ಗುಂಡಿ ವೃತ್ತದಲ್ಲಿ ಮಾನವ ಸರಪಳಿ ರಚಿಸುವ ಮೂಲಕ ಮುಕ್ತಾಯಗೊಂಡಿತು.
ಜಾಥಾ ನಡಿಗೆಯುದ್ದಕ್ಕೂ ಸಿರಿಧಾನ್ಯ ಕುರಿತು ಘೋಷಣೆಗಳನ್ನು ಹಾಗೂ ಸಿರಿಧಾನ್ಯಕ್ಕೆ ಸಂಬಂಧಿಸಿದ ಹಾಡುಗಳು ಹಾಗೂ ಬಿತ್ತಿ ಚಿತ್ರಗಳು ಹಾಗೂ ಪತ್ರಗಳ ಮುಖಾಂತರ ಜಾಗೃತಿಯನ್ನು ಮೂಡಿಸಲಾಯಿತು.
ಜಂಟಿ ಕೃಷಿ ನಿರ್ದೇಶಕ ಶ್ರೀನಿವಾಸ್ ಚಿಂತಾಲ್, ತಹಶೀಲ್ದಾರ್ ಅಶ್ವಥ್, ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು, ತೋಟಗಾರಿಕೆ ಉಪ ನಿರ್ದೇಶಕರು, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷರು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರುಗಳು, ಕೃಷಿ ಪರಿಕರ ಮಾರಾಟಗಾರರ ಸಂಘದ ಅಧ್ಯಕ್ಷರು ಕೃಷಿ ಅಧಿಕಾರಿಗಳು ಹಾಗೂ ಎಲ್ಲಾ ಇಲಾಖೆಯ ಅಧಿಕಾರಿ ಸಿಬ್ಬಂದಿ ವರ್ಗದವರು ಇದ್ದರು.




