ಬಾಗಲಕೋಟೆ: ಮಕ್ಕಳ ಪೌಷ್ಟಿಕ ಆಹಾರ ಪದ್ಧತಿಗೆ ಸರ್ಕಾರ ಒತ್ತು ನೀಡಿ ಅಭಿಯಾನ ಪ್ರಾರಂಭಿಸಿದೆ. ಗ್ರಾಮೀಣ ಬಡ ಮಕ್ಕಳು ಗರ್ಭಿಣಿಯರು ಹಾಗು ಬಾಣಂತಿಯರ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಯಲ್ಲಿ ಸುಧಾರಣೆ ಕಾಣಲು ಅನುಕೂಲವಾಗಿದೆ ಎಂದು ಸಿಡಿಪಿಓ ಅನುರಾದ ಹಾದಿಮನಿ ಹೇಳಿದರು.
ಹರಿ ಮಂದಿರ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ಪೋಷಣ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮಹಿಳೆಯರು ಮತ್ತು ಮಕ್ಕಳಲ್ಲಿ ಅಪೌಷ್ಟಿಕತೆ ಮಹಾಮಾರಿಯಂತೆ ಕಾಡುತ್ತಿದೆ. ಇದಕ್ಕೆ ಕಡಿವಾಣ ಹಾಕಲು ಮಹಿಳೆಯರು ಮುಂದಾಗಬೇಕು. ಅಪೌಷ್ಟಿಕತೆಯಿಂದ ತಾಯಿ, ಮಗುವಿನ ಸಾವು ಸಂಭವಿಸುವ ಸಾಧ್ಯತೆಯಿದೆ. ಇದರ ನಿವಾರಣೆಗೆ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮಹಿಳೆಯರು ಪೌಷ್ಟಿಕ ಆಹಾರ ಸೇವಿಸಿ, ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.
ಇದೇ ಸಂರ್ಭದಲ್ಲಿ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ಮಾಡಿದರು. ಗ್ರಾಮ ಪಂಚಾಯತಿ ಅಧ್ಯಕ್ಷೆ ಸುನಂದಾ ಮಾನೋಜಿ, ಉಪಾಧ್ಯಕ್ಷ ಜಿನ್ನುಮತ ಉಪಾಧ್ಯ, ಮೇಲ್ವಿಚಾರಕಿ ಎಸ್.ಆರ್.ಕದಮ್ ಸೇರಿದಂತೆ ಗ್ರಾಮದ ಎಲ್ಲಾ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತಿಯಿದ್ದರು.



