ಬೆಂಗಳೂರು: ಕಳೆದ ಎರಡೂವರೆ ತಿಂಗಳಿನಿಂದ ಬಿರು ಬೇಸಿಗೆಯಿಂದ ಕತ್ತರಿಸಿರುವ ರಾಜ್ಯದಲ್ಲಿ ಇದೇ 18–19ರಂದು ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಮುನ್ಸೂಚನೆ ನೀಡುವ ಮೂಲಕ ತುಸು ನಿರಾಳದ ಸುದ್ದಿಯನ್ನು ನೀಡಿದೆ.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಎರಡು ದಿನ ಎಲ್ಲ 31 ಜಿಲ್ಲೆಗಳಿಗೂ ಐಎಂಡಿ ‘ಯೆಲ್ಲೊ ಅಲರ್ಟ್’ ಸೂಚನೆ ನೀಡಿದೆ. ಪ್ರತಿ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದೂ ಮುನ್ನೆಚ್ಚರಿಕೆ ನೀಡಲಾಗಿದೆ.
ಕಳೆದ ವಾರದ ದಕ್ಷಿಣ ಹಾಗೂ ಉತ್ತರ ಒಳನಾಡಿನ ಕೆಲವು ಭಾಗದಲ್ಲಿ ಮಳೆ ಸುರಿದು ತಂಪೆರೆದಿತ್ತು. ಅದಾದ ಮೇಲೆ ಬಿಸಿಲಿನ ವಾತಾವರಣ ಕಾಣಿಸಿತ್ತು. ಈ ವಾರದಲ್ಲಿ ಮುಂಗಾರು ಪೂರ್ವ ಮಳೆ ಉತ್ತಮವಾಗಿ ಸುರಿಯುವ ಸಾಧ್ಯತೆಯಿದೆ ಎಂದೂ ತಿಳಿಸಿದೆ.
ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಮೈಸೂರು ಜಿಲ್ಲೆಗಳ ಕೆಲವು ಭಾಗದಲ್ಲಿ ಮಂಗಳವಾರ ಹಗುರ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಹಾಗೂ ಮಲೆನಾಡು ಭಾಗದ ಕೆಲವು ಪ್ರದೇಶಗಳಲ್ಲಿ ಬುಧವಾರ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.



