ಬೆಂಗಳೂರು: ಬಂಗಾಳಕೊಲ್ಲಿ, ಅರಬ್ಬಿ ಸಮುದ್ರ ಭಾಗದಲ್ಲಿ ಉಂಟಾಗಿರುವ ಚಂಡಮಾರುತದ ಪ್ರಭಾವದಿಂದಾಗಿ ರಾಜ್ಯಾದ್ಯಂತ ಸೆಪ್ಟಂಬರ್ 2ರವರೆಗೆ ಒಂದು ವಾರಗಳ ಕಾಲ ಭಾರಿ ಮಳೆ ಸುರಿಯಲಿದೆ.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ರಾಜ್ಯದ ಹಲವು ಭಾಗಗಳಲ್ಲಿ ಶನಿವಾರ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದ್ದು ಮಲೆನಾಡು ಸೇರಿದಂತೆ ಹಲವಾರು ಪ್ರದೇಶಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.
ಕರಾವಳಿ ಜಿಲ್ಲೆಗಳಲ್ಲಿ 200 ಮಿಲಿ ಮೀಟರ್ಗೂ ಅಧಿಕ ಮತ್ತು ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗಲಿದ್ದು, ರೆಡ್ ಅಲರ್ಟ್ ನೀಡಲಾಗಿದೆ. ನಂತರ ಎರಡು ದಿನ ಉತ್ತರ ಕನ್ನಡ ಸೇರಿ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ, ಬೀದರ್, ಕಲಬುರಗಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಕನಿಷ್ಠ 115 ಮಿಲಿ ಮೀಟರ್ ನಿಂದ ಗರಿಷ್ಠ 200 ಮಿಲಿ ಮೀಟರ್ ವರೆಗೆ ಧಾರಾಕಾರ ಮಳೆ ಬರುವ ಸಂಭವವಿದೆ.
ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಮುಂದಿನ ಎರಡು ದಿನಗಳ ಪೈಕಿ ಒಂದು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.



