ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘ ಮತ್ತು ಬಿಬಿಎಂಪಿ ನೌಕರರ ಸಹಕಾರ ಸಂಘದಿಂದ ನೆರವು
ವಯನಾಡ್ ನಲ್ಲಿನ ಸಂತ್ರಸ್ತರಿಗೆ ದಿನಸಿ ಸಾಮಗ್ರಿಗಳು ಮತ್ತು ಅಗತ್ಯ ವಸ್ತುಗಳ ತಲುಪಿಸುವ ವಾಹನಕ್ಕೆ ಚಾಲನೆ
ಬೆಂಗಳೂರು: ಬಿಬಿಎಂಪಿ ಕೇಂದ್ರ ಕಛೇರಿಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘ ಮತ್ತು ಬಿಬಿಎಂಪಿ ನೌಕರರ ಸಹಕಾರ ಸಂಘದಿಂದ ಕೇರಳದ ವಯನಾಡ್ ನಲ್ಲಿ ಮಳೆ ಪ್ರವಾಹ, ಭೂಕುಸಿತದಿಂದ ಸಂಕಷ್ಟದಲ್ಲಿರುವ ಸಂತ್ರಸ್ತರಿಗೆ ಅಗತ್ಯ ವಸ್ತುಗಳ ನೆರವು ಮತ್ತು ದಿನಸಿ ಸಾಮಾಗ್ರಿಗಳನ್ನು ತಲುಪಿಸುವ ವಾಹನಕ್ಕೆ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಮತ್ತು ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘ ಮತ್ತು ಸಹಕಾರ ಸಂಘದ ಅಧ್ಯಕ್ಷರಾದ ಎ.ಅಮೃತ್ ರಾಜ್ ಚಾಲನೆ ನೀಡಿದರು.
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
ಇದೇ ವೇಳೆ ಮಾತನಾಡಿದ ತುಷಾರ್ ಗಿರಿನಾಥ್, ಜನರಿಗೆ ಸಮಸ್ಯೆ ಮತ್ತು ಸಂಕಷ್ಟಗಳು ಬಂದಾಗ ಬಿಬಿಎಂಪಿ ನೌಕರರ ಸಂಘವು ಸಹಾಯ, ಸಹಕಾರ ನೀಡುತ್ತಾ ಬಂದಿದೆ. ವಯನಾಡ್ ದುರಂತದಲ್ಲಿ ನಮ್ಮ ಬಿಬಿಎಂಪಿ ಸಂಘವು ಅಂದಾಜು 25ಲಕ್ಷ ರೂಪಾಯಿ ಮೌಲ್ಯದ ದಿನಸಿ ಸಾಮಾಗ್ರಿಗಳು ನೀಡುತ್ತಿದ್ದಾರೆ ಎಂದರು.
ಬಿಬಿಎಂಪಿ ನೌಕರರ ಸಂಘವು ಸಾಮಾಜಿಕ ಸೇವಾ ಕಾರ್ಯಗಳನ್ನು ಮಾಡುತ್ತಾ ಬಂದಿದೆ. ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಸಂಬಳದಲ್ಲಿ ವಯನಾಡ್ ಸಂತ್ರಸ್ತರಿಗೆ ನೆರವಿನ ಸಹಾಯ ಹಸ್ತ ನೀಡಿದ್ದಾರೆ. ವಯನಾಡ್ ದುರಂತದಲ್ಲಿ ನೋವಿನ ಸಂಗತಿ, ಇಂತಹ ಸಂಕಷ್ಟದ ಸಮಯದಲ್ಲಿ ಸರ್ಕಾರದ ಅಧಿಕಾರಿಗಳ ಜೊತೆಯಲ್ಲಿ ಸಂಘ, ಸಂಸ್ಥೆಗಳು ಸಹಕಾರ ನೀಡುತ್ತಿದೆ ಎಂದರು.
ಎ.ಅಮೃತ್ ರಾಜ್ ಮಾತನಾಡಿ, ಕೇರಳ ವಯನಾಡ್ ನಲ್ಲಿ ಮಳೆ ಪ್ರವಾಹ ದುರಂತದಲ್ಲಿ ಜನರು ಸಂಕಷ್ಟದಲ್ಲಿ ಇದ್ದಾರೆ .ಸರ್ಕಾರ ಜೊತೆಯಲ್ಲಿ ಸಂಘ, ಸಂಸ್ಥೆಗಳು ಸಾರ್ವಜನಿಕರು ಸಹಕಾರ ನೀಡಿದಾಗ ಬಂದ ಸಂಕಷ್ಟಗಳಿಗೆ ಸುಲಭ ಪರಿಹಾರವಾಗುತ್ತದೆ ಎಂದರು.
ನಮ್ಮ ಸಂಘಟನೆ ಈ ಹಿಂದೆ ಉತ್ತರ ಕರ್ನಾಟಕ ಮತ್ತು ಕೊಡಗು ಮಳೆ ಪ್ರವಾಹದಿಂದ ಸಂಕಷ್ಟ ಸಮಯದಲ್ಲಿ ದಿನಸಿ ಸಾಮಾಗ್ರಿಗಳನ್ನು ತೆಗೆದುಕೊಂಡು ಜನರಿಗೆ ನೀಡಲಾಯಿತು. ಧರ್ಮಸ್ಥಳದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾದಗ 1ಲಕ್ಷ ಲೀಟರ್ ಕುಡಿಯುವ ನೀರನ್ನು ನೀಡಲಾಯಿತು ಎಂದರು.
ವಯನಾಡ್ ಸಂತ್ರಸ್ತರಿಗೆ ಹತ್ತು ಟನ್ ಆಹಾರ ಪದಾರ್ಥಗಳು ಮತ್ತು ದಿನ ನಿತ್ಯ ಬಳಕೆಯ ವಸ್ತುಗಳಾದ(ಹಾಸಿಗೆ, ದಿಂಬು, ಬೆಡ್ ಶಿಟ್, ಸ್ವೆಟರ್, ಜರ್ಕಿನ್, ಪಾದರಕ್ಷೆಗಳು, ಸೀರೆ, ಕಂಬಳಿ, ಮಹಿಳೆಯರ ನೈಟ್ ಡ್ರೆಸ್ ಮತ್ತು ಪಂಚೆ, ಟವಲ್, ಲುಂಗಿ, ಟೀ ಶರ್ಟ್) ನೀಡಲಾಗುತ್ತಿದೆ ಎಂದರು.
ಕ್ಷೇಮಾಭಿವೃದ್ದಿ ಸಂಘದ ಮತ್ತು ಸಹಕಾರ ಸಂಘದ ಪದಾಧಿಕಾರಿಗಳಾದ ಸಾಯಿಶಂಕರ್, ಎ.ಜಿ.ಬಾಬಣ್ಣ, ಕೆ.ಜಿ.ರವಿ, ಡಾ.ಶೋಭಾ, ಹೆಚ್.ಕೆ.ಹರೀಶ್, ಸೋಮಶೇಖರ್, ಆರ್.ರೇಣುಕಾಂಬ , ಕೆ.ಮಂಜೇಗೌಡ, ಶ್ರೀಧರ್ ಎನ್, ಸಂತೋಷ್ ಕುಮಾರ್, ಎನ್.ಮಂಜುನಾಥ್, ಕೆ.ನರಸಿಂಹ ಕೆ.ಸಂತೋಷ್ ಕುಮಾರ್ ನಾಯ್ಕ, ಸಿ.ಎಂ.ಮುನಿರಾಜು, ಮಹೇಶ್ ಎಂ, ಮಂಜುನಾಥ್ ಎಲ್.ಆರ್, ಹರೀಶ್ ಕುಮಾರ್ ಎನ್, ವಿನಯಕುಮಾರ್, ರಾಜಶೇಖರ್, ಮಂಜುನಾಥ್, ವಾಣಿ ಅರ್.ಪಿ. ಮೊದಲಾದವರು ಹಾಜರಿದ್ದರು.




