ರಕ್ತದಾನ ಶ್ರೇಷ್ಠದಾನ, ಜನರ ಬಾಳಿಗೆ ಆಶಾಕಿರಣ
ದಾವಣಗೆರೆ: ರಕ್ತದಾನ ಶ್ರೇಷ್ಠದಾನ. ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡುವ ಮೂಲಕ ಸಂಕಷ್ಟದಲ್ಲಿರುವ ಜನರ ಬಾಳಿಗೆ ಆಶಾಕಿರಣವಾಗಿ ಇತರರಿಗೆ ಮಾದರಿಯಾಗಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಷಣ್ಮುಖಪ್ಪ ಹೇಳಿದರು.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಆರೋಗ್ಯ ಮತ್ತು ಇಲಾಖೆ, ರಕ್ತ ಕೇಂದ್ರ, ಸಿ.ಜಿ ಆಸ್ಪತ್ರೆ ಮತ್ತು ಜಿಲ್ಲೆಯ ವಿವಿಧ ರಕ್ತ ಕೇಂದ್ರಗಳು, ಎನ್.ಎಸ್.ಎಸ್, ಎನ್.ಸಿ.ಸಿ. ಮತ್ತು ಆರ್.ಆರ್.ಸಿ. ಕಾಲೇಜು ಸಹಯೋಗದೊಂದಿಗೆ ನಗರದ ಬಿ.ಇ.ಎ ಶಿಕ್ಷಣ ಮಹಾವಿದ್ಯಾಲಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆಯ ಕಾರ್ಯಕ್ರಮ ಉದ್ಟಾಟಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ರಕ್ತದ ಅವಶ್ಯಕತೆ ಹೆಚ್ಚಾಗಿದ್ದು, ಎಲ್ಲಾ ಬ್ಲಡ್ ಬ್ಯಾಂಕ್ಗಲಳು ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ರಕ್ತದ ಶಿಬಿರ ಹಾಗೂ ರಕ್ತದಾನದ ಕುರಿತು ಜಾಗೃತಿ ಮೂಡಿಸಬೇಕು. ಹಿಮೋಗ್ಲೊಬಿನ್ ಪ್ರಮಾಣ 12 ಗ್ರಾಂಗಿಂತ ಹೆಚ್ಚಿರುವವರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಬಹುದು ಎಂದರು.
ಇತ್ತೀಚಿನ ದಿನಗಳಲ್ಲಿ ಅಪಘಾತ ಹಾಗೂ ಮಹಿಳೆಯರ ಹೆರಿಗೆ ಸಂದರ್ಭದಲ್ಲಿ ರಕ್ತದ ಅವಶ್ಯಕತೆ ಹೆಚ್ಚಾಗಿರುವುದರಿಂದ ಜನ ವರ್ಷಕ್ಕೆ ಒಮ್ಮೆಯಾದರೂ ರಕ್ತದಾನ ಮಾಡಿ ಜೀವ ಉಳಿಸುವಲ್ಲಿ ಸಹಕಾರಿಯಾಗಬೇಕು ಎಂದರು.
ಇದೇ ಸಂದರ್ಭದಲ್ಲಿ ಸ್ವಯಂ ಪ್ರೇರಿತರಾಗಿ ಅತಿ ಹೆಚ್ಚು ಬಾರಿ ರಕ್ತದಾನ ಮಾಡಿದ ರಕ್ತದಾನಿಗಳಿಗೆ ಪ್ರಶಸ್ತಿ ಪತ್ರ ನೀಡಿ ಸನ್ಮಾನಿಸಲಾಯಿತು.
ಜಾಗೃತಿ ಜಾಥಾ: ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆಯ ಅಂಗವಾಗಿ ರಕ್ತದಾನ ಜಾಗೃತಿ ಜಾಥಕ್ಕೆ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾದವ್ ವಿಠ್ಠಲ್ ರಾವ್ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. “ರಕ್ತ ನೀಡಿ ಭರವಸೆ ನೀಡಿ”, “ಜೊತೆಯಾಗಿ ನಾವು ಜೀವ ಉಳಿಸೋಣ” ಎಂಬ ಘೋಷ ವಾಕ್ಯದೊಂದಿಗೆ ಜಾಥಾವು ಬಿ.ಇ.ಎ ಮಹಾವಿದ್ಯಾಲಯ ಶಾಲೆಯಿಂದ ಸಾಗಿ ರಿಂಗ್ ರೋಡ್, ಅಮೃತ ವಿದ್ಯಾಲಯ ಶಾಲೆ ಮೂಲಕ ಬಿ.ಇ.ಎ ಶಾಲೆಗೆ ಬಂದು ತಲುಪಿತು.
ಚಿಗಟೇರಿ ಜಿಲ್ಲಾ ಆಸ್ಪತ್ರೆಯ ಅಧೀಕ್ಷಕ ಡಾ. ನಾಗೇಂದ್ರಪ್ಪ ಎಂ ಬಿ, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕದ ಜಿಲ್ಲಾ ಕಾರ್ಯಕ್ರಮ ಅಧಿಕಾರಿ ಡಾ.ಪಿ.ಡಿ ಮುರುಳೀಧರ್, ಬಿ.ಇ.ಎ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರರಾದ ಡಾ.ಎ.ಜೆ ನೀತಾ, ಸಹಾಯಕ ಪ್ರಾಧ್ಯಾಪಕರಾದ ಮುರುಗೇಶ್.ಕೆಐಸಿಟಿಸಿ ಕೇಂದ್ರದ ಆಪ್ತ ಸಮಾಲೋಚಕ ಬಿ.ಡಿ ಮಹೇಂದ್ರಪ್ಪ , ಡಾ. ಬಾರ್ಕಿ ಮೊದಲಾದವರು ಹಾಜರಿದ್ದರು.




