ಶ್ರೀಮಂತಿಕೆಯನ್ನು ಸರಳತೆಯಲ್ಲಿ ಬಚ್ಚಿಡುವುದು, ಸಾಮಾಜಿಕ ಸಮೀಕ್ಷೆಯಿಂದ ಮಾಹಿತಿಯನ್ನು ಮುಚ್ಚಿಡುವುದು ಸ್ವಾರ್ಥ ಮನಸ್ಥಿತಿಯ ಮುಖವಾಡದ ಅನಾವರಣ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ದೀನ ದಲಿತರ, ಹಿಂದುಳಿದವರ, ಬಡ ಜನರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಅಭಿವೃದ್ದಿಪಡಸಿ, ಸಾಮಾಜಿಕ ನ್ಯಾಯ ಕಲ್ಪಿಸಲು ಸರ್ಕಾರ ನಡೆಸುತ್ತಿರುವ ಸಮೀಕ್ಷೆಯಿಂದ ಮಾತ್ರ ಸಾಧ್ಯವೇ ಹೊರತು, ತೋರಣಿಕೆ, ಪ್ರಚಾರದ ಮೋಹದಿಂದ ಕೂಡಿದ ಸಮಾಜಸೇವೆಯಿಂದ ಅಭಿವೃದ್ದಿ ಮಾಡಲು ಸಾಧ್ಯವಿಲ್ಲ.
ಸಾಮಾಜಿಕ ವ್ಯವಸ್ಥೆಯಲ್ಲಿ ಸರ್ವ ಜನಾಂಗದವರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಪರಿಸ್ಥಿತಿಗಳನ್ನು ಅವಲೋಕಿಸಿ, ಬಡವರ್ಗದವರ ಏಳಿಗೆಗಾಗಿ ಸರ್ಕಾರ ಸಮರ್ಪಕವಾದ ನೀತಿಗಳನ್ನು ರೂಪಿಸುವುದು ಸಾಂವಿಧಾನಿಕ ಜವಾಬ್ದಾರಿ. ಆದರೆ ಶ್ರೀಮಂತಿಕೆ, ದೊಡ್ಡಸ್ಥಿಕೆಯ ಚಾದರವನ್ನೇ ಹೊದ್ದು ಮಲಗಿದವರು ಕ್ಷುಲ್ಲುಕ ಕಾರಣಗಳನ್ನು ನೀಡಿ ಸಾಮಾಜಿಕ ಸಮೀಕ್ಷೆಯಿಂದ ಹೊರಗುಳಿಯುವುದು ಅಷ್ಟೇ ಬೇಜವಾಬ್ದಾರಿ.

ಸಂಸ್ಥೆಗಳನ್ನು ಜಗದಗಲ ಬೆಳೆಸಲು ಜನರಿಂದ ಆಯ್ಕೆಯಾದ ಸರ್ಕಾರದಿಂದಲೇ ಭೂಮಿ,ನೀರು, ತೆರಿಗೆ, ವಿದ್ಯುತ್, ಸೇರಿದಂತೆ ಅನೇಕ ಸವಲತ್ತುಗಳನ್ನು ಪಡೆಯುವ ಸಂಸ್ಥೆಗಳ ಮಾಲೀಕರು ಜನರ ಏಳಿಗೆಗಾಗಿ ನಡೆಯುತ್ತಿರುವ ಸಮೀಕ್ಷೆಯನ್ನೇ ತಿರಸ್ಕರಿಸುವುದು ಆತ್ಮಸಾಕ್ಷಿಗೆ ಬಗೆಯುವ ದ್ರೋಹ ಮಾತ್ರವಲ್ಲ ಉದ್ದಟತನದ ಪರಮಾವಧಿ.
ಸರಳತೆ ಶ್ರೀಮಂತಿಕೆಯನ್ನ ಮಾತ್ರ ಮುಚ್ಚಿಡಬಹುದೇ ಹೊರತು, ಜಾತಿಗ್ರಸ್ಥ ಮನಸ್ಥಿತಿಯನ್ನಲ್ಲ…!
– ಬಿ ಕೆ ಹರಿಪ್ರಸಾದ್, ವಿಧಾನ ಪರಿಷತ್ ಸದಸ್ಯ




