ಬೆಂಗಳೂರು: ಹೊಸ ವರ್ಷ ಸಂಭ್ರಮಾಚರಣೆಯ ಸಮಯದಲ್ಲಿ ಕೆಲವು ವಿದ್ವಂಸಕ ಶಕ್ತಿಗಳು ಸಮಾಜದಲ್ಲಿ ಶಾಂತಿ ಭಂಗಕ್ಕೆ ಪ್ರಯತ್ನ ನಡೆಸುವ ಸಾಧ್ಯತೆ ಇದ್ದು ವ್ಯಾಪಕ ಮುಂಜಾಗ್ರತೆ ವಹಿಸುವಂತೆ ಕೇಂದ್ರ ಗುಪ್ತದಳ ಎಚ್ಚರಿಕೆ ಸಂದೇಶ ರವಾನಿಸಿದೆ ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಭಾಗಗಳಲ್ಲಿ ಹೈಅಲರ್ಟ್ ಘೋಷಣೆ ಮಾಡಲಾಗಿದೆ.
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
ಕೇಂದ್ರ ಗೃಹ ಇಲಾಖೆಯ ಸೂಚನೆಯ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಸಲೀಂ ಅವರು ರಾಜ್ಯದ ಎಲ್ಲಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮಹಾನಗರಗಳ ಪೊಲೀಸ್ ಆಯುಕ್ತರಿಗೆ ಸಂದೇಶ ರವಾನಿಸಿದ್ದು ಜನನಿ ಬಿಡ ಪ್ರದೇಶಗಳು ಮತ್ತು ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಳ ಮಾಡುವಂತೆ ಸೂಚಿಸಿದ್ದಾರೆ.
ಪೊಲೀಸ್ ಮಹಾನಿರ್ದೇಶಕರ ಸೂಚನೆಯಾಗಿ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಪ್ರವಾಸಿ ತಾಣಗಳು ಅಣೆಕಟ್ಟುಗಳು ಮತ್ತು ಪ್ರಮುಖ ನಗರಗಳಲ್ಲಿ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಬೆಂಗಳೂರು, ಮೈಸೂರು,ಮಂಗಳೂರು, ಹುಬ್ಬಳ್ಳಿ ಧಾರವಾಡ,ಬೆಳಗಾವಿ, ಕಲಬುರಗಿ ಸೇರಿದಂತೆ ರಾಜ್ಯ ಮಹಾನಗರಗಳು ಜಿಲ್ಲಾ, ಪ್ರಮುಖ ತಾಲ್ಲೂಕು ಕೇಂದ್ರಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಿ ಪರಿಸ್ಥಿತಿಯ ಮೇಲೆ ಹಿರಿಯ ಪೊಲೀಸ್ ಅಧಿಕಾರಿಗಳು ನಿಗಾ ವಹಿಸಿದ್ದಾರೆ.
ಹೊಸವರ್ಷ ಸಂಭ್ರಮದ ಇಂದು ರಾತ್ರಿಯಿಂದ ನಾಳೆ ಬೆಳಿಗ್ಗೆಯವರೆಗೆ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಹೊಸವರ್ಷದ ಸಂಭ್ರಮಾಚರಣೆ ನಡೆಯುವ ಪ್ರಮುಖ ಪ್ರದೇಶಗಳು ರಸ್ತೆಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಸಿಸಿ ಕ್ಯಾಮರಾಗಳನ್ನು ಅಳವಡಿಸಿ ಜನ ಸಂದಣಿ ಮೇಲೆ ಕಣ್ಣಿಡಲು ಡ್ರೋನ್ ಕ್ಯಾಮರಾಗಳ ವ್ಯವಸ್ಥೆ ಮಾಡಲಾಗಿದೆ.
ರಾಜ್ಯದ ಹೆಚ್ಚು ಜನ ಸೇರುವ ರೆಸ್ಟೋರೆಂಟ್ ಗಳು ರೆಸಾರ್ಟ್ ಬಾರ್ ಆಂಡ್ ರೆಸ್ಟೋರೆಂಟ್ ಗಳು ಪ್ರವಾಸಿ ಕೇಂದ್ರಗಳಿಗೆ ಭದ್ರತೆ ಕೈಗೊಂಡು ನಿಗಾವಹಿಸಲಾಗಿದೆ, ಕುಡಿದು ವಾಹನ ಚಲಾಯಿಸುವವರ ತಪಾಸಣೆ ನಡೆಸಲು ಪೊಲೀಸರು ಮುಂದಾಗಿದ್ದಾರೆ.
ಮಂಗಳೂರು, ಕಾರವಾರ,ಉಡುಪಿ ರಾಮನಗರ, ಕೋಲಾರ, ಮೈಸೂರು ಸೇರಿದಂತೆ ರಾಜ್ಯಾದ್ಯಂತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆಯಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ.




