ಮಂಗಳೂರು: ಉಗ್ರರು ಹಬ್ಬದ ಸಂದರ್ಭದಲ್ಲಿ ಭಾರೀ ಸ್ಪೋಟಕ್ಕೆ ಸಂಚು ರೂಪಿಸಿದ್ದಾರೆ ಎಂದು ರಾಷ್ಟ್ರೀಯ ಸುದ್ದಿ ವಾಹಿನಿಗಳು ವರದಿ ಮಾಡಿದ ಹಿನ್ನೆಲೆಯಲ್ಲಿ ಕರಾವಳಿ ಭಾಗದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಇತ್ತೀಚಿನ ದಿನಗಳಲ್ಲಿ ಕರಾವಳಿ ಭಾಗಗಳಲ್ಲಿ ಉಗ್ರರು ಚಟುವಟಿಕೆ ನಡೆಸುತ್ತಿದ್ದಾರೆ ಎಂಬ ವರದಿಗಳ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳ ಕಟ್ಟೆಚ್ಚರ ವಹಿಸಿದೆ. ಹಬ್ಬದ ಸಂದರ್ಭದಲ್ಲಿ ಉಗ್ರರು ದಾಳಿ ನಡೆಸಲು ಹೊಂಚು ಹಾಕಿರುವ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ ಎಂದು ವರದಿಯಾಗಿದೆ.
ಪಂಜಾಬ್ ನಲ್ಲಿ ಸ್ವಾತಂತ್ರ್ಯೋತ್ಸವ ವೇಳೆ ಲಂಚ್ ಬಾಕ್ಸ್ ನಲ್ಲಿ ಸ್ಪೋಟಕ್ಕೆ ಸಂಚು ರೂಪಿಸಲಾಗಿತ್ತು. ಇದೀಗ ಸಾಲುಸಾಲು ಹಬ್ಬಗಳ ಸೀಜನ್ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಉಗ್ರರು ದಾಳಿ ಮಾಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಕಳೆದ ಕೆಲವು ದಿನಗಳ ಹಿಂದೆ ಕೇರಳಕ್ಕೆ ಉಗ್ರರು ನುಸುಳಿರುವ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಕರಾವಳಿ ಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿತ್ತು. ಇದೀಗ ಸ್ಯಾಟಲೈಟ್ ಪೋನ್ ಕಾರ್ಯಾಚರಣೆಯ ಮಾಹಿತಿಯ ಹಿನ್ನೆಲೆಯಲ್ಲಿ ಮತ್ತೆ ಹೈ ಅಲರ್ಟ್ ಘೋಷಿಸಲಾಗಿದೆ.




