ಎಚ್.ಡಿ.ಕುಮಾರಸ್ವಾಮಿ ವಿರುದ್ಧದ ಪ್ರಕರಣಕ್ಕೆ ತಡೆ ನೀಡಿದ ಹೈಕೋರ್ಟ್

2 years ago

ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದ ಸಿಎಂ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಮಹಿಳಾ ಆಯೋಗ ದಾಖಲಿಸಿದ್ದ ಪ್ರಕರಣಕ್ಕೆ ರಾಜ್ಯ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಕುಮಾರಸ್ವಾಮಿ ವಿರುದ್ಧ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಈ ಬಗ್ಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಕುಮಾರಸ್ವಾಮಿ ಅವರಿಗೆ ಸಮನ್ಸ್ ಜಾರಿಗೊಳಿಸಿದ್ದರು. ಇದನ್ನು ಪ್ರಶ್ನಿಸಿ ಎಚ್.ಡಿ. ಕುಮಾರಸ್ವಾಮಿ ಸಲ್ಲಿಸಿದ್ದ ರಿಟ್ ಅರ್ಜಿ ಸಲ್ಲಿಸಿದ್ದರು. ಇದನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ವಿಚಾರಣೆ ನಡೆಸಿದರು.

ವಿಚಾರಣೆ ವೇಳೆ ಕುಮಾರಸ್ವಾಮಿ ಪರ ವಾದ ಮಂಡಿಸಿದ ಹೈಕೋರ್ಟ್ ವಕೀಲ ಎ.ವಿ.ನಿಶಾಂತ್, ಆರೋಪಕ್ಕೆ ಸಂಬಂಧಿಸಿದಂತೆ ಆಯೋಗ ಕುಮಾರಸ್ವಾಮಿ ಅವರಿಗೆ ನೋಟಿಸ್ ನೀಡಿ ಖುದ್ದು ಹಾಜರಾಗಲು ಸೂಚಿಸಿದೆ. ಆದರೆ, ಈ ನೋಟಿಸ್ ಪೂರ್ವಗ್ರಹ ಪೀಡಿತ ಭಾವನೆಯಿಂದ ಕೂಡಿದ್ದು ಸ್ವಾಭಾವಿಕ ನ್ಯಾಯತತ್ವಗಳಿಗೆ ವಿರುದ್ಧವಾಗಿದ್ದು, ಇದನ್ನು ರದ್ದುಗೊಳಿಸಬೇಕು ಎಂದು ಕೋರಿದರು.

ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ನೋಟಿಸ್ ಗೆ ತಡೆ ನೀಡಿ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿಗೆ ತುರ್ತು ನೋಟಿಸ್ ಜಾರಿಗೊಳಿಸಲು ಆದೇಶಿಸಿತು.ಮಹಿಳಾ ಆಯೋಗದ ಅಧ್ಯಕ್ಷರು ಜಾರಿ ಮಾಡಿರುವ ನೋಟಿಸ್ ಗೆ ಅರ್ಜಿ ಇತ್ಯರ್ಥವಾಗುವರೆಗೂ ತಡೆ ವಿಧಿಸಿತು.

Leave a Reply