ಬೆಂಗಳೂರು: ವಿಧಾನ ಮಂಡಲದ ಚಳಿಗಾಲದ ಅಧಿವೇಶನದಲ್ಲಿ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕುರಿತು ಆಕ್ಷೇಪಾರ್ಹ ಪದ ಬಳಕೆ ಆರೋಪದಲ್ಲಿ ಬಿಜೆಪಿ ಶಾಸಕ ಸಿ ಟಿ ರವಿ ವಿರುದ್ಧ ನಡೆಸುತ್ತಿರುವ ತನಿಖೆಗೆ ರಾಜ್ಯ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಸಿ ಟಿ ರವಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಪ್ರಕರಣದ ತನಿಖೆಗೆ ಮಧ್ಯಂತರ ತಡೆ ನೀಡಿತು. ಅಲ್ಲದೆ ಈ ಪ್ರಕರಣ ಸಂಬಂಧ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಹ್ಯಾಂಡ್ ಸಮನ್ಸ್ ನೀಡುವಂತೆ ಸೂಚಿಸಿ ವಿಚಾರಣೆಯನ್ನು ಪೆಬ್ರುವರಿ 20ಕ್ಕೆ ಮುಂದೂಡಿತು.
ವಿಚಾರಣೆ ವೇಳೆ ಸಿ ಟಿ ರವಿ ಪರ ವಕೀಲರು, ಶಾಸನಸಭೆ ನಡೆಯುತ್ತಿದ್ದ ಸಂದರ್ಭದಲ್ಲಿ ನಡೆದ ಮಾತುಕತೆಗೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಾಗಿದೆ. ಇದು ಶಾಸಕರ ವಿಶೇಷಾಧಿಕಾರವನ್ನು ಮೊಟಕುಗೊಳಿಸಿದಂತಾಗಿದೆ. ಈ ಸಂಬಂಧ ಸಭಾಪತಿ ನೋಟಿಸ್ ಜಾರಿ ಮಾಡಿ ರೂಲಿಂಗ್ ನೀಡಿದ್ದಾರೆ. ಈ ಅಂಶವನ್ನು ನ್ಯಾಯಾಲಯ ಪರಿಗಣಿಸಬೇಕು ಎಂದು ಕೋರಿದರು.
ಅಲ್ಲದೆ, ಸಭಾಪತಿ ಪೀಠದಲ್ಲಿ ಇಲ್ಲದ ಸಂದರ್ಭದಲ್ಲಿ ಘಟನೆ ನಡೆದಿದೆ. ಸದನದಲ್ಲಿ ಸದಸ್ಯರು ನೀಡಿದ ಹೇಳಿಕೆ ಸಂಬಂಧ ವಿಚಾರಣೆ ನ್ಯಾಯಾಲಯದ ಮುಂದಿದೆ. ಸಭಾಪತಿ ನಿರ್ಧಾರ ಪ್ರಕಟಿಸಿದ ಬಳಿಕ ಸಿಐಡಿ ಪೊಲೀಸರು ತನಿಖೆ ನಡೆಸುವುದಕ್ಕೆ ಅವಕಾಶವಿದೆಯೇ ಎಂಬುದನ್ನು ಪರಿಶೀಲಿಸಬೇಕಾಗಿದೆ ಎಂದು ಪೀಠಕ್ಕೆ ವಿವರಿಸಿದರು.
ಈ ವೇಳೆ ಪೀಠ, ಸಭೆ ನಡೆಯುತ್ತಿರಲಿ. ಇಲ್ಲದಿರಲಿ ಶಾಸಕರಿಗೆ ವಿನಾಯ್ತಿ ಇದೆ. ಸರಿ ಆದರೆ, ಅದು ಅರ್ಹವಾದ ವಿನಾಯ್ತಿ ಇರಬೇಕಾಗುತ್ತದೆ. ಸಂಪೂರ್ಣ ವಿನಾಯ್ತಿ ಅಲ್ಲ. ಸದನದಲ್ಲಿ ಚರ್ಚೆ ಮಾಡುವ ವಿಚಾರಗಳಲ್ಲಿ ಸದಸ್ಯರಿಗೆ ವಿನಾಯತಿ ಇರಲಿದೆ. ಈ ರೀತಿಯ ಹೇಳಿಕೆಗಳನ್ನು ಸದಸ್ಯರು ಹೇಗೆ ನೀಡುವುದಕ್ಕೆ ಸಾಧ್ಯ ಎಂದು ಪ್ರಶ್ನಿಸಿತು.
ವಾದ ಮುಂದುವರೆಸಿದ ವಕೀಲರು, ಸದನದಲ್ಲಿ ಸದಸ್ಯರು ಬಾಯಿಗೆ ಬಂದದ್ದು ಮಾತನಾಡಿದರೆ ಸಭಾಪತಿ ಅವರನ್ನು ಸದನದಿಂದ ಹೊರಹಾಕಬಹುದು. ಇಲ್ಲಿ ಅರ್ಹವಾದ ರಕ್ಷಣೆ ಇದೆ. ಆಕ್ಷೇಪಾರ್ಹ, ಅಪರಾಧವಾಗುವ ಮಾತುಗಳನ್ನು ಸದಸ್ಯರು ಆಡಿದರೂ ಇದರ ಸಂಜ್ಞೆಯನ್ನು ಸದನ ಪರಿಗಣಿಸಲಿದೆ ಎಂದರು.
ಸರ್ಕಾರದ ಪರ ವಾದ ಮಂಡಿಸಿದ ಎಸ್‌ಪಿಪಿ ಬಿ.ಎ. ಬೆಳ್ಳಿಯಪ್ಪ, ಸದನದಲ್ಲಿ ಚರ್ಚೆ ಮುಂದೂಡಿದ ಬಳಿಕ ನಡೆದ ಪ್ರತಿಭಟನೆ ವೇಳೆ ಸದಸ್ಯ ಸಿ ಟಿ ರವಿ ಅವರ ಧ್ವನಿ ಮಾದರಿ ದಾಖಲೆಗೆ ಸಂಬಂಧಿಸಿದ ಅರ್ಜಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದಿದೆ. ಹೈಕೋರ್ಟ್ ಆದೇಶದಿಂದ ಅದು ತೀರ್ಮಾನವಾಗಿಲ್ಲ’ ಎಂದು ಪೀಠದ ಗಮನ ಸೆಳೆದರು.
ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಇಲ್ಲಿ(ಹೈಕೋರ್ಟ್) ಪ್ರಕರಣದ ವಿಚಾರಣೆ ನಡೆಯುತ್ತಿರುವ ಸಂದರ್ಭದಲ್ಲಿ ಯಾವುದೇ ನ್ಯಾಯಾಲಯದಲ್ಲಿ ಪ್ರಕ್ರಿಯೆಗೆ ಅನುಮತಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಿತು.
ವಾದ ಮುಂದುವರೆಸಿದ ಎಸ್‌ಪಿಪಿ, ಸದನ ನಡೆಯುತ್ತಿರಲಿಲ್ಲ. ಆಗ ಸದನ ಮುಂದೂಡಲ್ಪಟ್ಟಿತ್ತು. ಸಭಾಪತಿಗೆ ದೂರು ನೀಡಲಾಗಿದ್ದು, ಅದನ್ನು ಪರಿಶೀಲಿಸಿದ್ದ ಸಭಾಪತಿಗಳು, ಇದು ನಡೆಯಬಾರದಿತ್ತು ಎಂದು ತಿಳಿಸಿದ್ದಾರೆ. ಅವರು ಸದನ ನಡೆಯುತ್ತಿರಲಿಲ್ಲ ಎಂಬುದಾಗಿ ತಿಳಿಸಿದ್ದಾರೆ ಎಂದರು.




