ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಹೈಕೋರ್ಟ್ ನಿರಾಕರಿಸಿದೆ. ಈ ಮೂಲಕ ಮಾಜಿ ಸಚಿವ ನಾಗೇಂದ್ರ ಮತ್ತು ಸಿಎಂ ಸಿದ್ದರಾಮಯ್ಯ ಅವರಲ್ಲಿ ಸಂತಸ ಮೂಡಿದೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಬಹುಕೋಟಿ ಹಣ ಅಕ್ರಮ ವರ್ಗಾವಣೆಯಾಗಿರುವ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಆದೇಶಿಸಬೇಕು ಎಂದು ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಈ ಕುರಿತ ತೀರ್ಪು ಪ್ರಕಟಿಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ, ಬ್ಯಾಂಕಿಂಗ್ ನಿಯಂತ್ರಣ ಅಧಿನಿಯಮದ ಸೆಕ್ಷನ್ 35ಎ ಅಡಿಯಲ್ಲಿ ಸಿಬಿಐ ತನಿಖೆಗೆ ಅವಕಾಶವಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಈ ನಿಯಮ ಆಧರಿಸಿ ಕೋರ್ಟ್ ಒಂದು ವೇಳೆ ಅನುಮತಿ ನೀಡಿದರೆ ಎಲ್ಲಾ ಬ್ಯಾಂಕ್ಗಳೂ ಇದನ್ನೇ ಕೇಳಬಹುದು. ಆಗ ದೆಹಲಿ ಸ್ಪೆಷಲ್ ಪೊಲೀಸ್ ಎಸ್ಟಾಬ್ಲಿಷ್ಮೆಂಟ್ ಆಕ್ಟ್ ನಿರರ್ಥಕವಾಗಬಹುದು ಎಂದು ಅರ್ಜಿ ತಿರಸ್ಕರಿಸಿದ್ದಾರೆ.
ವಿಚಾರಣೆ ವೇಳೆ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಬಿ. ವಿ. ಆಚಾರ್ಯ, ಬ್ಯಾಂಕ್ ಸಲ್ಲಿಸಿರುವ ಅರ್ಜಿಯ ನಿರ್ವಹಣೆಯ ಬಗ್ಗೆ ಪ್ರಾಥಮಿಕ ಆಕ್ಷೇಪಣೆ ಎತ್ತಿದ್ದಾರೆ. ತನಿಖೆಯ ಅಧಿಕಾರ ರಾಜ್ಯ ಸರ್ಕಾರಕ್ಕಿದೆ. ತನಿಖೆ ಕಳಂಕಿತವೆಂದು ಯೂನಿಯನ್ ಬ್ಯಾಂಕ್ ಹೇಳಿಲ್ಲ. ಕೇವಲ ಬ್ಯಾಂಕ್ ನಿಯಂತ್ರಣ ಅಧಿನಿಯಮ ಸೆಕ್ಷನ್ 35ಎ ಉಲ್ಲೇಖಿಸಲಾಗಿದೆ. ತನಿಖೆಯ ವ್ಯಾಪ್ತಿ ಬಗ್ಗೆ ಸುಪ್ರೀಂಕೋರ್ಟ್ ಮಾತ್ರ ತೀರ್ಮಾನಿಸಬೇಕು. ಹೀಗಾಗಿ ಅರ್ಜಿ ವಿಚಾರಣೆಗೆ ಯೋಗ್ಯವಲ್ಲ ಎಂದು ವಾದ ಮಂಡಿಸಿದರು.




