ಕಾಂಗ್ರೆಸ್ ಸರ್ಕಾರಕ್ಕೆ ಮತ್ತೊಮ್ಮೆ ಹೈಕೋರ್ಟ್ ಛೀಮಾರಿ!
⚖️ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಪೊಲೀಸ್ ಸ್ಟೇಶನ್ ಮೇಲೆ ದಾಳಿ ಮಾಡಿದ ಮುಸ್ಲಿಂ ಮತಾಂಧರ ಮೇಲಿನ ಕೇಸ್ ವಾಪಸ್ ಪಡೆಯಲು ಹೊಂಚು ಹಾಕಿದ್ದ @INCKarnataka ಸರ್ಕಾರಕ್ಕೆ ಹೈಕೋರ್ಟ್ ಛೀಮಾರಿ ಹಾಕಿದ್ದು, ಸಿದ್ದರಾಮಯ್ಯ ಸರ್ಕಾರದ ಓಲೈಕೆ ರಾಜಕಾರಣಕ್ಕೆ ನ್ಯಾಯಾಲಯ ಚಡಿ ಏಟು ಕೊಟ್ಟಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
⚖️ಕಾಂಗ್ರೆಸ್ ಸರ್ಕಾರದ ಅನ್ಯಾಯದ ನಡೆಗಳಿಗೆ ನ್ಯಾಯಾಲಯ ಛೀಮಾರಿ ಹಾಕುತ್ತಿರುವುದು ಇದೆ ಮೊದಲಲ್ಲ.
⚖️ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಪಶು ಚಿಕಿತ್ಸಾಲಯಕ್ಕೆ ಬೀಗ ಹಾಕಿ ಅದನ್ನ ಅಲ್ಪಸಂಖ್ಯಾತರ ಇಲಾಖೆಗೆ ಹಸ್ತಾಂತರಿಸಲು ಹೊಂಚು ಕಾಕಿದ್ದ ಸಿಎಂ @siddaramaiah ಸರ್ಕಾರದ ನಿರ್ಧಾರಕ್ಕೆ ತಡೆಯಾಜ್ಞೆ ನೀಡಿ ಮಾನ್ಯ ಹೈಕೋರ್ಟ್ ಛೀಮಾರಿ ಹಾಕಿತ್ತು.
⚖️ವಿಧಾನ ಪರಿಷತ್ ಸದಸ್ಯ ಶ್ರೀ ಸಿ.ಟಿ.ರವಿ ಅವರನ್ನ ಅಕ್ರಮವಾಗಿ ಬಂಧಿಸಿದ್ದು ಅತ್ಯಂತ ತಪ್ಪು ಎಂದು ರಾಜ್ಯ @INCKarnataka ಸರ್ಕಾರದ ನಿರಂಕುಶವಾದಿ ಧೋರಣೆಗೆ ಛೀಮಾರಿ ಹಾಕಿದ್ದ ಮಾನ್ಯ ಹೈಕೋರ್ಟ್, ತತಕ್ಷಣವಾಗಿ ಅವರನ್ನು ಬಿಡುಗಡೆಗೊಳಿಸಿ ಎಂದು ಆದೇಶ ನೀಡಿತ್ತು.
⚖️ಬ್ರ್ಯಾಂಡ್ ಬೆಂಗಳೂರು ಕಟ್ಟುತ್ತೇವೆ ಎಂದು ಬಿಡಿಎ ಸಂಸ್ಥೆಯನ್ನು ಭ್ರಷ್ಟಾಚಾರ, ಅವ್ಯವಸ್ಥೆಯ ಕೂಪವಾಗಿಸಿರುವ @INCKarnataka ಸರ್ಕಾರವನ್ನ ಮಾನ್ಯ ಹೈಕೋರ್ಟ್ ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡು ಮಾರುವೇಷದಲ್ಲಿ ಒಮ್ಮೆ ನೋಡಿಕೊಂಡು ಬನ್ನಿ, ಸುಗ್ರೀವಾಜ್ಞೆ ಮೂಲಕ ಬಿಡಿಎ ಸಂಸ್ಥೆ ಮುಚ್ಚುವುದು ಒಳ್ಳೆಯದು ಎಂದು ಛೀಮಾರಿ ಹಾಕಿತ್ತು.
⚖️ಸರ್ಕಾರಿ ವಸತಿ ಶಾಲೆಯಲ್ಲಿ ಓದುವ ಬಡ ಕುಟುಂಬದ ಮಕ್ಕಳನ್ನ ಮಲಗುಂಡಿಗಿಳಿಸಿದವರ ಮೇಲೆ ಕ್ರಮ ಕೈಗೊಳ್ಳದ್ದಕ್ಕೆ ಸ್ವಯಂಪ್ರೇರಿತ ಕೇಸು ದಾಖಲಿಸಿಕೊಂಡು ನ್ಯಾಯಾಲಯ ಛೀಮಾರಿ ಹಾಕಿತ್ತು.
⚖️ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಪ್ರಕರಣದಲ್ಲಿ ಇ.ಡಿ. ಅಧಿಕಾರಿಗಳ ವಿರುದ್ಧ ಸುಳ್ಳು ಕೇಸು ದಾಖಲಿಸಿ ಕಡೆಗೆ ಹೈಕೋರ್ಟ್ ನಿಂದ ಛೀಮಾರಿ ಹಾಕಿಸಿಕೊಂಡಿತ್ತು.
⚖️ಮೂಡಾ ಹಗರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಶನ್ ಗೆ ನೀಡಿದ್ದ ಅನುಮತಿ ವಿರುದ್ಧ ಕೋರ್ಟ್ ಮೆಟ್ಲಲೇರಿದಾಗಲೂ ಸಿದ್ದರಾಮಯ್ಯ ಸರ್ಕಾರ ಮುಖಭಂಗ ಅನುಭವಿಸಿತ್ತು.
ಸಿಎಂ @siddaramaiah ನವರೇ, ನ್ಯಾಯಾಲಯಗಳ ಕೈಯಲ್ಲಿ ಛೀಮಾರಿ ಹಾಕಿಸಿಕೊಳ್ಳುವಲ್ಲಿ ನಿಮ್ಮ ಸರ್ಕಾರ ದಾಖಲೆ ಬರೆದಿದೆ. ತಾವು ರಾಜೀನಾಮೆ ನೀಡೋದಕ್ಕೆ ಇನ್ನೆಷ್ಟು ಬಾರಿ ಛೀಮಾರಿ ಹಾಕಿಸಿಕೊಳ್ಳಬೇಕು?
– ಆರ್ ಅಶೋಕ್, ವಿಧಾನಸಭೆ ವಿಪಕ್ಷ ನಾಯಕ




