ಬೆಂಗಳೂರು: ಪ್ರಾಥಮಿಕ 5, ಫ್ರೌಡ 8, 9 ಮತ್ತು 11ನೇ ತರಗತಿಗಳ ಪರೀಕ್ಷೆ ಮುಗಿದರೂ ವಿವಾದ ಮತ್ತು ಬಿಕ್ಕಟ್ಟು ಬಗೆಹರಿದಿಲ್ಲ. ಇದೀಗ ಸುಪ್ರೀಂ ಕೋರ್ಟ್ ರಾಜ್ಯದ ಪಠ್ಯಕ್ರಮ ಅನುಸರಿಸುವ ಸರ್ಕಾರಿ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ಕಳೆದ ಮಾರ್ಚ್ನಲ್ಲಿ 5, 8, 9 ಹಾಗೂ 11ನೇ ತರಗತಿಗಳಿಗೆ ನಡೆಸಿದ್ದ ಬೋರ್ಡ್ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸದಂತೆ ತಡೆಯಾಜ್ಞೆ ನೀಡಿದೆ.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ ರುಪ್ಸಾ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬೇಲಾ ಎಂ. ತ್ರಿವೇದಿ ನೇತೃತ್ವದ ನ್ಯಾಯಪೀಠ, ಸದ್ಯ ಯಾವುದೇ ಶಾಲೆಗಳು ಫಲಿತಾಂಶ ಪ್ರಕಟಿಸಬಾರದು. ಮುಂದಿನ ಆದೇಶದವರೆಗೂ ಕಾಯಬೇಕು ಎಂದು ಕಟ್ಟುನಿಟ್ಟಿನ ಸೂಚನೆಯನ್ನು ನೀಡಿದೆ.
ಮಾರ್ಚ್ನಲ್ಲಿ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿ ಆದೇಶ ಹೊರಡಿಸಿದ್ದ ಹೈಕೋರ್ಟ್, ಸ್ಥಗಿತಗೊಂಡಿರುವ ಪರೀಕ್ಷೆ ಮುಂದುವರಿಸಲು ಸೂಚನೆ ನೀಡಿತ್ತು. ಅದರಂತೆ ಬಳಿಕ ಶಾಲೆಗಳು ಪರೀಕ್ಷೆಗಳನ್ನು ನಡೆಸಿದ್ದವು. ಇದೀಗ ಫಲಿತಾಂಶ ಪ್ರಕಟವಾಗುವ ಸಂದರ್ಭದಲ್ಲೇ ಸುಪ್ರೀಂಕೋರ್ಟ್ ತಡೆಯಾಜ್ಞೆ ಬಂದಿದೆ. ಇದು ಫಲಿತಾಂಶವನ್ನು ಎದುರು ನೋಡುತ್ತಿದ್ದ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಸುಪ್ರೀಂಕೋರ್ಟ್ನ ಈ ಆದೇಶ ನಿರಾಸೆ ತಂದಿದೆ.
ಮೇಲ್ಮನವಿ ವಿಚಾರಣೆ ವೇಳೆ ರುಪ್ಸಾ ಪರ ವಾದ ಮಂಡಿಸಿದ್ದ ವಕೀಲರು, 5, 8 ಮತ್ತು 9ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಅಕಾರವಿಲ್ಲ ಎಂದು ವಾದ ಮಾಡಿದ್ದರು.
ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆಯಡಿ ತಿಳಿಸಿರುವಂತೆ 6ರಿಂದ 14 ವರ್ಷದ ಮಕ್ಕಳಿಗೆ ಬೋರ್ಡ್ ಮಟ್ಟದ ಪರೀಕ್ಷೆಗಳನ್ನು ನಡೆಸುವುದಕ್ಕೆ ಅವಕಾಶವಿಲ್ಲ. ಆದರೂ ರಾಜ್ಯ ಸರ್ಕಾರ ಈ ನಿರ್ಧಾರಕ್ಕೆ ಕೈಗೊಂಡಿದೆ. ಕರ್ನಾಟಕ ಹೈಕೋರ್ಟ್ ದ್ವಿಸದಸ್ಯ ಪೀಠ ನೀಡಿರುವ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು. ಫಲಿತಾಂಶವನ್ನು ಪ್ರಕಟಿಸದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದರು.
ಅಲ್ಲದೆ ಮೌಲ್ಯಮಾಪನವನ್ನು ಬೇಕಾಬಿಟ್ಟಿಯಾಗಿ ನಡೆಸಲಾಗಿದೆ. ಉತ್ತಮವಾಗಿ ಓದಿದ ಅಭ್ಯರ್ಥಿಗಳಿಗೆ ಕಡಿಮೆ ಅಂಕ ನೀಡಲಾಗಿದೆ. ಮೌಲ್ಯ ಮಾಪನ ದೋಷದ ಬಗ್ಗೆ ಹಲವಾರು ಖಾಸಗಿ ಶಿಕ್ಷಣ ಸಂಸ್ಥೆಗಳೇ ಅನುಮಾನ ವ್ಯಕ್ತಪಡಿಸಿವೆ. ಇದು ಸಾಕಷ್ಟು ದೋಷಪೂರಿತವಾಗಿರುವುದರಿಂದ ತಡೆಯಾಜ್ಞೆ ನೀಡಬೇಕೆಂದು ವಕೀಲರು ಕೋರಿದರು. ಅಂತಿಮವಾಗಿ ವಾದ ಆಲಿಸಿದ ನ್ಯಾಯಮೂರ್ತಿಗಳು ಮಂಗಳವಾರ ಫಲಿತಾಂಶ ಪ್ರಕಟಿಸದಂತೆ ತಡೆಯಾಜ್ಞೆ ನೀಡಿದರು.




