ಬೆಂಗಳೂರು: 2017ರಲ್ಲಿ ಪ್ರಧಾನ ಮಂತ್ರಿ ಅವಾಸ್ ಯೋಜನೆಯಡಿ 17 ಲಕ್ಷ ಮನೆಗಳು ಮಂಜೂರಾಗಿದ್ದರೂ, ತಂತ್ರಾಂಶದ ಮೂಲಕ ಅನುಷ್ಠಾನಗೊಳಿಸುವ ವಿಚಾರದಲ್ಲಿ ರಾಜ್ಯ ಸರ್ಕಾರ ಮುಂದಾಗಲಿಲ್ಲ ಎಂಬ ಆರೋಪ ಇದೆ ಎಂದು ಮಾಜಿ ಸಿಎಂ ಮತ್ತು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ನಾನು ಸಿಎಂ ಆದ ಬಳಿಕ 11 ಲಕ್ಷ ಮನೆಗಳ ನಿರ್ಮಾಣಕ್ಕೆ ಅನುಮತಿ ನೀಡಿದ್ದೇವೆ. ಸಿದ್ದರಾಮಯ್ಯ ಅವರು ಪ್ರಧಾನ ಮಂತ್ರಿ ಆಯುಷ್ಮಾನ್ ಯೋಜನೆಯನ್ನು ಜಾರಿಗೆ ತರದೆ, ರಾಜ್ಯದ ಹೆಸರಿನಲ್ಲಿ ಯೋಜನೆ ನಡೆಸಿದರು ಎನ್ನಲಾಗಿದೆ. ಹೊಸ ಶಿಕ್ಷಣ ನೀತಿಯನ್ನು ಜಾರಿಗೆ ತಂದಿದ್ದೇವೆ; ಆದರೆ ರಾಜ್ಯದಲ್ಲಿ ಎನ್‌ಇಪಿ ಕೂಡ ಇಲ್ಲ, ಎಸ್‌ಇಪಿ ಕೂಡ ಇಲ್ಲ ಎಂಬ ಟೀಕೆ ಕೇಳಿಬರುತ್ತಿದೆ ಎಂದರು.
ಪಿಎಂ ಪೋಷಣಾ ಯೋಜನೆಗೆ ವರ್ಷಕ್ಕೆ 500 ಕೋಟಿ ರೂ. ಅನುದಾನ ಬರುತ್ತದೆ. ಅದನ್ನು ರಾಜ್ಯದ ಹೆಸರಿನಲ್ಲಿ ನಡೆಸಿ ಅಕ್ರಮ ನಡೆದಿದೆ ಎನ್ನುವ ಆರೋಪಗಳಿವೆ. ಜನೌಷಧಿ ಕೇಂದ್ರಗಳನ್ನು ಮುಚ್ಚಲು ಪ್ರಯತ್ನಿಸಿದ್ದರೂ ಹೈಕೋರ್ಟ್ ತಡೆ ನೀಡಿತು. ಈಗ ವಿಜಿ ಜಿ ರಾಮ್ ಜಿ ಯೋಜನೆಯನ್ನು ಸಹ ವಿರೋಧಿಸುತ್ತಿದ್ದಾರೆ ಎಂಬ ಆಕ್ಷೇಪ ಇದೆ ಎಂದರು.




