ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ನಗರಗಳಲ್ಲಿ ಸಂಚರಿಸುತ್ತಿರುವ ಬೈಕ್ ಟ್ಯಾಕ್ಸಿಗಳಿಗೆ ಸೂಕ್ತ ನಿಯಮಾವಳಿಗಳನ್ನು ಮಾಡದ ರಾಜ್ಯ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
- ವ್ಯಕ್ತಿಯನ್ನು ಗುರುತಿಸಿದರೆ ಸಮಾಜವನ್ನೇ ಗುರುತಿಸಿದಂತೆ: ಡಾ. ಎ ಆರ್ ಗೋವಿಂದಸ್ವಾಮಿ
- ಸಂವಿಧಾನ ಪೀಠಿಕೆ ದೇಶದ ಆತ್ಮವಿದ್ದಂತೆ: ಆದಿತ್ಯ ಚಟರ್ಜಿ
- ಕುಸಿಯುತ್ತಿರುವ ಪ್ರಜಾಪ್ರಭುತ್ವದ ವ್ಯಾಪ್ತಿ ಮತ್ತು ದೀರ್ಘಾವಧಿ ಪ್ರಧಾನಿಯ ಸಾಧನೆಗಳು
- ಜೀರಾ ರೈಸ್, ಘೀ ರೈಸ್ ಮತ್ತು ಲೆಮನ್ ರೈಸ್ ಮಾಡುವ ಸರಳ ವಿಧಾನ
- ಸಮಾಧಾನ್ ಸಮಾರೋಹ್ ಯಶಸ್ವಿಗೊಳಿಸಿ: ಡಾ.ಶಾಲಿನಿ ರಜನೀಶ್
ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತಗೊಳಿಸಿದ್ದ ರಾಜ್ಯ ಸರ್ಕಾರದ ಆದೇಶ ಎತ್ತಿ ಹಿಡಿದಿರುವ ಹೈ ಕೋರ್ಟ್ ನ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ಓಲಾ, ಉಬರ್ ಮತ್ತು ರ‍್ಯಾಪಿಡೋ ಮಾತೃ ಸಂಸ್ಥೆಗಳು ಸಲ್ಲಿಸಿರುವ ಮೇಲ್ಮನವಿಗಳ ವಿಚಾರಣೆಯನ್ನು ನ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ ಎಂ ಜೋಶಿ ಅವರ ನೇತೃತ್ವದ ವಿಭಾಗೀಯ ಪೀಠ ನಡೆಸಿತು.
ಈ ವೇಳೆ ಹಿಂದಿನ ವಿಚಾರಣೆ ಸಮಯದಲ್ಲಿ ಬೈಕ್ ಟ್ಯಾಕ್ಸಿಗಳ ಸೇವೆಗೆ ಸೂಕ್ತ ನಿಯಮಾವಳಿ ರೂಪಿಸಲು ಸರ್ಕಾರಕ್ಕೆ ಸೂಚನೆ ನೀಡಲಾಗಿತ್ತು. ಈ ಕುರಿತಂತೆ ಒಂದು ತಿಂಗಳಾದರೂ ಕ್ರಮ ಕೈಗೊಂಡಿಲ್ಲ ಎಂದು ನ್ಯಾಯಪೀಠ ಸರ್ಕಾರದ ನಡೆಗೆ ಅಸಮಾಧಾನ ವ್ಯಕ್ತಪಡಿಸಿತು.
ವಿಚಾರಣೆ ವೇಳೆ ಹಾಜರಿದ್ದ ಅಡ್ವೋಕೇಟ್ ಜನರಲ್ ಶಶಿಕಿರಣ ಶೆಟ್ಟಿ, ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ನಿರ್ಬಂಧ ವಿಧಿಸಿದ್ದು, ಪ್ರಯಾಣಿಕರು ಬಳಸಲು ಅನುಮತಿ ನೀಡಿಲ್ಲ. ಕೇವಲ ಡೆಲಿವರಿಗಾಗಿ ಬಳಸಲು ಅವಕಾಶ ನೀಡಲಾಗಿದೆ. ಡೆಲಿವರಿಗಾಗಿ ಟ್ಯಾಕ್ಸಿ ಎಂದು ನೋಂದಣಿ ಮಾಡಿಸುವ ಅಗತ್ಯವಿಲ್ಲ. ಈ ಸಂಬಂಧ ನೀತಿ ರೂಪಿಸಿದ್ದೇವೆ ಎಂದು ತಿಳಿಸಿದರು.
ಬೈಕ್ ನಲ್ಲಿ ಪ್ರಯಾಣಿಕರನ್ನು ಕರೆದೊಯ್ಯಲು ಅವಕಾಶವಿಲ್ಲ. ಅನುಮತಿ ಇಲ್ಲದಿದ್ದರೂ ಬೈಕ್ ಟ್ಯಾಕ್ಸಿಗಳನ್ನು ಪ್ರಯಾಣಿಕರಿಗಾಗಿ ಬಳಸುತ್ತಿದ್ದಾರೆ. ಈ ರೀತಿಯಲ್ಲಿ ನಡೆದುಕೊಳ್ಳುತ್ತಿರುವ ಬೈಕ್ ಟ್ಯಾಕ್ಸಿ ಕಂಪನಿಗಳ ವಿರುದ್ಧ ಕ್ರಮಕ್ಕೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.
ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಪೀಠ, ಬೈಕ್ ಟ್ಯಾಕ್ಸಿಗಳಿಗೆ ನೀತಿ ರೂಪಿಸಲು ಒಂದು ತಿಂಗಳು ಸಮಯ ನೀಡಲಾಗಿದೆ. ಆದರೆ, ಈವರೆಗೂ ಸರ್ಕಾರ ನೀತಿ ರೂಪಿಸಿಲ್ಲ. ಅಲ್ಲದೆ, ಬೈಕ್ ಟ್ಯಾಕ್ಸಿ ನಿರ್ಬಂಧಿಸಿರುವ ಸರ್ಕಾರದ ಕ್ರಮಕ್ಕೆ ತಡೆ ನೀಡುವ ಬಗ್ಗೆ ಪರಿಶೀಲಿಸುತ್ತಿದ್ದೇವೆ ಎಂದು ತಿಳಿಸಿತು.
ಮುಂದಿನ ವಿಚಾರಣೆ ವೇಳೆ ಬೈಕ್ ಟ್ಯಾಕ್ಸಿ ಬಗ್ಗೆ ನಿಮ್ಮ ವಾದವನ್ನು ಮಂಡಿಸಿ. ಬಳಿಕ ಸೂಕ್ತ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿ ವಿಚಾರಣೆಯನ್ನು ಅಕ್ಟೋಬರ್ 15ಕ್ಕೆ ಮುಂದೂಡಿತು.


