ದೆಹಲಿ: ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವನ್ನು ಎತ್ತಿ ಹಿಡಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಪಟ್ಟಿಮಾಡಲು ಸುಪ್ರೀಂ ಕೋರ್ಟ್ ಬುಧವಾರ ಸಹಮತ ವ್ಯಕ್ತಪಡಿಸಿದೆ.
ಇಂದು ವಕೀಲ ಪ್ರಶಾಂತ್ ಭೂಷಣ್ ಅವರು ಹಿಜಾಬ್ ಪ್ರಕರಣದ ಅರ್ಜಿಗಳ ತುರ್ತು ಪಟ್ಟಿಗಾಗಿ ಸಿಜೆಐ ರಮಣ ಅವರ ಎದುರು ಪ್ರಸ್ತಾಪಿಸಿದರು. ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಹೀಗಾಗಿ ಹಿಜಾಬ್ ಪ್ರಕರಣಗಳ ಪಟ್ಟಿ ಮಾಡಬೇಕು ಎಂದು ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ ರಮಣ ಎರಡು ಬೆಂಚುಗಳು ಕಾರ್ಯನಿರ್ವಹಿಸುತ್ತಿಲ್ಲ. ಹಾಗಾಗಿ ನಾವು ಮರುವಿತರಣೆ ಮಾಡಬೇಕಾಯಿತು. ಮುಂದಿನ ವಾರ ಸೂಕ್ತ ಪೀಠದ ಮುಂದೆ ಪಟ್ಟಿ ಮಾಡಿ ಎಂದು ಹೇಳಿದರು.




