ಬೆಂಗಳೂರು: ರಾಜ್ಯದಲ್ಲಿ ಇಬ್ಬರು ಮಕ್ಕಳಲ್ಲಿ ಪತ್ತೆಯಾಗಿರುವ ಎಚ್ಎಂಪಿವಿ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ರೋಗ ಲಕ್ಷಣಗಳು ಮತ್ತು ಅದಕ್ಕೆ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಮಾರ್ಗಸೂಚಿಯನ್ನು ಪ್ರಕಟಿಸಿದೆ.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಜ್ವರ ಇದ್ದರೆ ಜನನಿಬಿಡ ಪ್ರದೇಶಕ್ಕೆ ಹೋಗದಂತೆ ಹಾಗೂ ಅನಗತ್ಯ ಓಡಾಟ ತಪ್ಪಿಸಿ, ಆಗಾಗ್ಗ್ಯೆ ಕೈಗಳನ್ನೂ ಸಾಬೂನು ಹಾಗೂ ಸ್ಯಾನಿಟೈಸರ್ ಗಳಿಂದ ಸ್ವಚ್ಛಗೊಳಿಸಿ, ಜ್ವರ, ಕೆಮ್ಮು, ನೆಗಡಿ ಇರುವವರು ಆದಷ್ಟು ಹೊರಗೆ ಓಡಾಡದೆ ಮನೆಯಲ್ಲೇ ಇದ್ದು, ಚಿಕಿತ್ಸೆ ಪಡೆಯಿರಿ. ಇಂತಹವರು ಬಳಿಸಿದ ಟವಲ್ ಮತ್ತು ಬಟ್ಟೆಗಳನ್ನು ಬೇರೆಯವರು ಬಳಸದಿರಿ.
ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದನ್ನು ತಪ್ಪಿಸಿ ಸ್ವಯಂ ಔಷಧಗಳನ್ನು ಸೇವಿಸದೆ ನೆಗಡಿ, ಕೆಮ್ಮು ಕಾಣಿಸಿಕೊಂಡರೆ ವೈದ್ಯರನ್ನು ಭೇಟಿ ಮಾಡಿ, ಚಿಕಿತ್ಸೆ ಪಡೆಯಿರಿ. ಮನೆ ಮತ್ತು ಸುತ್ತಲಿನ ಪ್ರದೇಶಗಳಲ್ಲಿ, ಕಚೇರಿಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಿ. ಪೌಷ್ಠಿಕಾಂಶವಿರುವ ಆಹಾರ ಸೇವಿಸಿ, ಮಕ್ಕಳು ಹಾಗೂ ಹಿರಿಯರ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸಿ.
ಹ್ಯೂಮನ್ ಮೆಟಾನ್ಯುಮೊವೈರಸ್ ಡಿಸೆಂಬರ್ ಮಧ್ಯಭಾಗದಲ್ಲಿ ಚೀನಾದ ಉತ್ತರದ ಪ್ರಾಂತ್ಯದಲ್ಲಿ ಕಾಣಿಸಿಕೊಂಡ ಭಯಾನಕ ವೈರಸ್ ಆಗಿದೆ. ಕೋವಿಡ್ ವೈರಸ್ ರೀತಿಯಲ್ಲೇ, ಎಲ್ಲಾ ವಯಸ್ಸಿನವರಿಗೆ ಶ್ವಾಸಕೋಶ ಸಂಬಂಧ ಸಮಸ್ಯೆಯಾಗುವ ಸಾಧ್ಯತೆಯಿದೆ.
ವಿಶೇಷವಾಗಿ ಮಕ್ಕಳಿಗೆ ಅದರಲ್ಲೂ 15 ವರ್ಷಕ್ಕಿಂತ ಕಮ್ಮಿ ವಯಸ್ಸಿನ ಮಕ್ಕಳಿಗೆ ಈ ವೈರಸ್ ಬೇಗ ಹರಡುವ ಸಾಧ್ಯತೆ ಹೆಚ್ಚು. ಇನ್ನು ವಯಸ್ಕರು ಮತ್ತು ರೋಗ ನಿರೋಧಕ ಶಕ್ತಿ ಕಮ್ಮಿ ಇರುವವರಿಗೆ ಇದು ವೇಗವಾಗಿ ಹರಡಬಹುದು. 2001ರಲ್ಲಿ ಇದನ್ನು ಮೊದಲ ಬಾರಿಗೆ ಡೆನ್ಮಾರ್ಕ್ ದೇಶದ ಸಂಶೋಧಕರು ಈ ವೈರಸ್ ಅನ್ನು ಪತ್ತೆ ಹಚ್ಚಿದ್ದರು.
ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷದ ಡಿಸೆಂಬರ್ ನಲ್ಲಿ ಸಾಮಾನ್ಯ ಶೀತ ಮತ್ತು ಉಸಿರಾಟದ ಸಮಸ್ಯೆ ಪ್ರಕರಣಗಳಲ್ಲಿ ಯಾವುದೇ ಗಮನಾರ್ಹ ಏರಿಕೆ ಇಲ್ಲ ಎಂದು ಆರೋಗ್ಯ ಅಧಿಕಾರಿಗಳು ಹೇಳಿದ್ದಾರೆ.
ಹೆಚ್ಎಂಪಿವಿ ಒಂದು ಉಸಿರಾಟದ ಕಾಯಿಲೆಯಾಗಿದ್ದು, ಚಳಿಗಾಲದಲ್ಲಿ ಶೀತ ಮತ್ತು ಜ್ವರದ ತರಹದ ಲಕ್ಷಣಗಳನ್ನು ಉಂಟು ಮಾಡುತ್ತದೆ. ವಿಶೇಷವಾಗಿ ಮಕ್ಕಳು ಮತ್ತು ವಯಸ್ಸಾದ ವ್ಯಕ್ತಿಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ರಾಜ್ಯದ ಸಮಗ್ರ ರೋಗ ಕಣ್ಗಾವಲು ಕಾರ್ಯಕ್ರಮದ ಯೋಜನಾ ನಿರ್ದೇಶಕ ಡಾ. ಅನ್ಸಾರ್ ಅಹದ್ ಹೇಳಿದ್ದಾರೆ.



