ಬಳ್ಳಾರಿ: ಜಿಲ್ಲೆಯ ಸಂಡೂರು, ಕುಡುತಿನಿ, ತೆಕ್ಕಲಕೋಟೆ, ತೋರಣಗಲ್ಲು, ಸಿರುಗುಪ್ಪ ಮತ್ತು ಕುರುಗೋಡು ಘಟಕದಲ್ಲಿ ಖಾಲಿ ಇರುವ ಗೃಹರಕ್ಷಕರ ಸ್ವಯಂಸೇವಕ ಸ್ಥಾನಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಮೇ 15 ರಂದು ಬೆಳಿಗ್ಗೆ 06 ಗಂಟೆಗೆ ಬಳ್ಳಾರಿ ಜಿಲ್ಲಾ ಸಶಸ್ತ್ರ ಮೀಸಲು ಪಡೆ (ಡಿಎಆರ್) ಮೈದಾನದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಅಭ್ಯರ್ಥಿಗಳಿಗೆ ದೈಹಿಕ ಪರೀಕ್ಷೆ ಮತ್ತು ಸಂದರ್ಶನ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರು ಹಾಗೂ ಗೃಹರಕ್ಷಕರ ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ದೈಹಿಕ ಪರೀಕ್ಷೆ ಮತ್ತು ದೈಹಿಕ ಸಹಿಷ್ಣುತೆ ಪರೀಕ್ಷೆ: ಪುರುಷ ಅಭ್ಯರ್ಥಿಗಳು 168 ಸೆಂ.ಮೀ ಎತ್ತರ ಇರಬೇಕು. ಎದೆ ಸುತ್ತಳತೆ 86 ಸೆಂ.ಮೀ. ಹೊಂದಿರಬೇಕು. ತೂಕ 50 ಕೆ.ಜಿ. ಹೊಂದಿರಬೇಕು. 400 ಮೀಟರ್ ಓಟವನ್ನು 02 ನಿಮಿಷಗಳ ಒಳಗೆ ಓಡಬೇಕು. ಗುಂಡು ಎಸೆತ (4 ಕೆ.ಜಿ) 3.75 ಮೀಟರ್ ಎಸೆಯಬೇಕು.
ಸೂಚನೆ: ಅಭ್ಯರ್ಥಿಗಳು ದೈಹಿಕ ಪರೀಕ್ಷೆ ಮತ್ತು ಸಂದರ್ಶನಕ್ಕೆ ಹಾಜರಾಗುವಾಗ ವಿದ್ಯಾರ್ಹತೆಗೆ ಸಂಬಂಧಿಸಿದಂತೆ ಕೆಳಕಂಡ ದಾಖಲೆಗಳನ್ನು ತರಬೇಕು.
ಎಸ್.ಎಸ್.ಎಲ್.ಸಿ. ಮೂಲ ಅಂಕಪಟ್ಟಿ, ವರ್ಗಾವಣೆ ಪ್ರಮಾಣ ಪತ್ರ ಜೆರಾಕ್ಸ್ ಪ್ರತಿ, ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ಕುಟುಂಬ ಪಡಿತರ ಚೀಟಿ ಮೂಲ ಪ್ರತಿ. ಸಂದರ್ಶನಾ ಪತ್ರ ಮೂಲ ಪ್ರತಿ. ಜೆರಾಕ್ಸ್ ದಾಖಲೆಗಳನ್ನು ಪರಿಗಣಿಸಲಾಗುವುದಿಲ್ಲ.
ದೈಹಿಕ ಪರೀಕ್ಷೆ ಮತ್ತು ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಆಗಮಿಸುವುದು. ಯಾವುದೇ ರೀತಿಯ ಭತ್ಯೆ ನೀಡಲಾಗುವುದಿಲ್ಲ.




