ಮಂಗಳೂರು: ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಬಗ್ಗೆ ಹಗುರವಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಗಡಿಪಾರು ಮಾಡಬೇಕು, ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ವಿರುದ್ಧ ಅವಹೇಳನಕಾರಿ ಮಾತನಾಡಿರುವ ಸಿ.ಟಿ. ರವಿ ಅವರನ್ನು ವಿಧಾನ ಪರಿಷತ್ ಸದಸ್ಯ ಸ್ಥಾನದಿಂದ ವಜಾ ಮಾಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಈ ವೇಳೆ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮಾತನಾಡಿ, ಅಮಿತ್ ಶಾ ಅವರಿಗೆ ಗೃಹ ಸಚಿವರಾಗುವ ಅರ್ಹತೆ ಇಲ್ಲ. ಇಂತಹ ವ್ಯಕ್ತಿಗೆ ಗೃಹ ಸಚಿವ ಸ್ಥಾನದಂತಹ ಉನ್ನತ ಹುದ್ದೆ ನೀಡಲಾಗಿದೆ. ಅಂಬೇಡ್ಕರ್ ಬಗ್ಗೆ ಬಿಜೆಪಿಗೆ ಇರುವ ಭಾವನೆ ಅಮಿತ್ ಶಾ ಮೂಲಕ ಹೊರಬಿದ್ದಿದೆ. ಅಮಿತ್ ಶಾ ಅವರನ್ನು ಗೃಹ ಸಚಿವ ಹುದ್ದೆ ಯಿಂದ ಕೆಳಗೆ ಇಳಿಸಬೇಕು ಎಂದು ಒತ್ತಾಯಿಸಿದರು.
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ಸಿ.ಟಿ. ರವಿಯನ್ನು ವಿಧಾನ ಪರಿಷತ್ ಸದಸ್ಯ ಸ್ಥಾನದಿಂದ ವಜಾಗೊಳಿಸಬೇಕು. ಈಗಾಗಲೇ ಬಂಧಿಸಿರುವ ಸಿ.ಟಿ. ರವಿ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ಇಡೀ ಸಮಾಜದ ಮಹಿಳೆಯರು ಸಿ.ಟಿ.ರವಿ ಹೇಳಿಕೆ ಖಂಡಿಸಬೇಕು ಎಂದು ಆಗ್ರಹಿಸಿದರು.




