ಬೆಂಗಳೂರು: ನೆಲಮಂಗಲದ ಬೇಗೂರು ಬಳಿಯ ತಾಳೇಕೆರೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿ ಒಂದೇ ಕುಟುಂಬದ 6 ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಚಾಲಕನ ನಿಯಂತ್ರಣ ತಪ್ಪಿ ಲಾರಿ ಕಾರಿನ ಮೇಲೆ ಪಲ್ಟಿಯಾಗಿ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು 6 ಮಂದಿ ಅಲ್ಲೇ ಅಪ್ಪಚ್ಚಿಯಾಗಿದ್ದು ಅಪಘಾತದ ದೃಶ್ಯ ಭಯಾನಕವಾಗಿದೆ.
ಕಾರಿನ ಮೇಲೆ ಕಂಟೇನರ್ ಬಿದ್ದಿದ್ದರಿಂದ ಕಾರಿನಲ್ಲಿದ್ದಚಂದ್ರ ಯಾಗಪ್ಪ ಗೋಳ್ (48), ಗೌರಾಬಾಯಿ (42), ದೀಕ್ಷಾ (12), ಜಾನ್ (16), ವಿಜಯಲಕ್ಷ್ಮಿ (36), ಆರ್ಯ (6)) ಸಾವನ್ನಪ್ಪಿದ್ದಾರೆ.ಇವರೆಲ್ಲರೂ ವಾರಾಂತ್ಯದ ಪ್ರವಾಸ ಕೈಗೊಂಡಿದ್ದರು ಎಂದು ಗ್ರಾಮಾಂತರ ಎಸ್ ಪಿ ಚಂದ್ರಶೇಖರ ಬಾಬಾ ತಿಳಿಸಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ಲಾರಿ ಕಾರಿನ ಮೇಲೆ ಪಲ್ಟಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು 6 ಮಂದಿ ಅಲ್ಲೇ ಅಪ್ಪಚ್ಚಿಯಾಗಿದ್ದಾರೆ. ಫೋಟೋ,ವಿಡಿಯೋ ಅಪಘಾತದ ಭೀಕರತೆಯನ್ನು ಬಿಂಬಿಸುತ್ತವೆ.
ಅತಿ ಭಾರ ಹೊಂದಿರುವ ಕಂಟೇನರ್ ಮೇಲೆತ್ತಲು ಲಾರಿ ಬೆಲ್ಟ್, ಚೈನ್‌ಗಳನ್ನ ತರಿಸಲಾಗಿತ್ತು. ಕೊನೆಗೆ ಹರಸಾಹಸ ಪಟ್ಟು ಮೂರು ಕ್ರೇನ್‌ಗಳ ಸಹಾಯದಿಂದ ಕಂಟೇನರ್ ಮೇಲೆತ್ತಿ ಕಾರನ್ನು ಹೊರತೆಗೆಯಲಾಗಿದೆ. ಈ ಭೀಕರ ಅಪಘಾತದಿಂದ ತಾಳೇಕೆರೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಕಿಮೀ ಗಟ್ಟಲೇ ಸಂಚಾರ ದಟ್ಟಣೆ ಉಂಟಾಗಿದ್ದು, ಸುಮಾರು ಐದಾರು ಕಿಮೀ ವರೆಗೆ ನಿಂತಿದ್ದ ವಾಹನಗಳನ್ನು ಪೊಲೀಸರು ಹರಸಾಹಸ ಪಟ್ಟು ಸುಗಮಗೊಳಿಸಿದ್ದಾರೆ. ಸ್ಥಳಕ್ಕೆ ಗ್ರಾಮಾಂತರ ಎಸ್ ಪಿ ಸಿ.ಕೆ ಬಾಬಾ ನೇತೃತ್ವದಲ್ಲಿ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದು, ಸಾರ್ವಜನಿಕರ ನೆರವಿನಿಂದ ಹರಸಾಹಸಪಟ್ಟು ಕಾರಿನಲ್ಲಿ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆದಿದ್ದಾರೆ.
ಸಂಪೂರ್ಣ ಅಪ್ಪಚ್ಚಿಯಾಗಿರುವ ಕಾರು ಬೆಂಗಳೂರು ರಿಜಿಸ್ಟ್ರೇಷನ್ ಹೊಂದಿದ್ದು, ಮೃತ ಆರು ಜನರು ವಿಜಯಪುರ ಮೂಲದವರು ಎಂಬ ಮಾಹಿತಿ ಲಭ್ಯವಾಗಿದೆ. ವಾರಾಂತ್ಯದಲ್ಲಿ ಪ್ರವಾಸಕ್ಕೆ ಹೊರಟಿದ್ದ ಕುಟುಂಬ 6 ತಿಂಗಳ ಹಿಂದೆಯಷ್ಟೇ ಕಾರು ಖರೀದಿಸಿತ್ತು. ನೆಲಮಂಗಲ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.



