ಬೆಳಗಾವಿ: ಒಂದೂವರೆ ಎಕರೆ ವಿಸ್ತೀರ್ಣದಲ್ಲಿ ಈ ಉದ್ಯಾನವನ ಹಾಗೂ ಸೌಂದರ್ಯೀಕರಣ ಕಾಮಗಾರಿ ನಡೆದಿದ್ದು, ಸುವರ್ಣಸೌಧದ ಭವ್ಯವಾದ ವಾಸ್ತುಶಿಲ್ಪಕ್ಕೆ ತೋಟಗಾರಿಕೆಯ ವಿನ್ಯಾಸವು ಪೂರಕವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ನೂತನ ಉದ್ಯಾನವನ ಹಾಗೂ ಕಾರಂಜಿಯನ್ನು ಉದ್ಘಾಟಿಸಿ, ಮಾತನಾಡಿದ ಅವರು, ಕೆ.ಆರ್.ಎಸ್ ನ ಹಾಗೂ ಆಲಮಟ್ಟಿ ಉದ್ಯಾನವನಗಳ ಮಾದರಿಗಳನ್ನು ಅಳವಡಿಸಿಕೊಂಡು ಸುವರ್ಣ ವಿಧಾನಸೌಧದ ಈ ಉದ್ಯಾನವನವನ್ನು ಅಭಿವೃದ್ಧಿಪಡಿಸಲಾಗಿದೆ ಎಂದರು.
ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗಳ ಸುತ್ತಲು ನಿರ್ಮಿಸಿರುವ ಉದ್ಯಾನವನ ಹಾಗೂ ಸೌಂದರ್ಯೀಕರಣವು ಈ ಪ್ರದೇಶಕ್ಕೆ ನೂತನ ಮೆರಗನ್ನು ನೀಡಿದೆ ಎಂದರು.
ಒಟ್ಟು 4.63 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣವಾಗಿರುವ ಉದ್ಯಾನವನ ಮತ್ತು ಸೌಂದರ್ಯೀಕರಣದ ಯೋಜನೆಯಡಿ ತೆರೆದ 2 ರಂಗಮಂದಿರವೂ ಇದ್ದು, ಒಟ್ಟು 400 ಮಂದಿ ಕುಳಿತುಕೊಳ್ಳಬಹುದಾದ ವ್ಯವಸ್ಥೆ ಇದೆ. ಒಟ್ಟಾರೆ 8 ಕಾರಂಜಿಗಳನ್ನು ಉದ್ಯಾನವನದಲ್ಲಿ ಅಳವಡಿಸಲಾಗಿದ್ದು, ಕಲ್ಲಿನ ಮೆಟ್ಟಿಲುಗಳ ಜಲಪಾತ, ಮೂವತ್ತು ಬಗೆಯ ಗಿಡಗಳನ್ನು ನೆಡಲಾಗಿದೆ. ಒಟ್ಟಾರೆ ಇದೊಂದು ಉತ್ತಮ ಕಾರ್ಯ ಎನ್ನುವುದು ನನ್ನ ಭಾವನೆ ಎಂದರು.




