ಬಳ್ಳಾರಿ: ಕೃಷಿ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಹನಿ ನೀರಾವರಿ ಕಾರ್ಯಕ್ರಮದಡಿ ತೋಟಗಾರಿಕೆ ಬೆಳೆ ಬೆಳೆಯುವ ಹಾಗೂ ಬೆಳೆಯಲು ಇಚ್ಚಿಸಿರುವ ರೈತ ಫಲಾನುಭವಿಗಳಿಗೆ ಸಹಾಯಧನ ನೀಡಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಸಂತೋಷ್ ಸಪ್ಪಂಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಸಾಮಾನ್ಯ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ಶೇ.90 ರಂತೆ ಗರಿಷ್ಠ 2 ಹೆಕ್ಟೇರ್‌ವರೆಗೆ ಹನಿ ನೀರಾವರಿ ಅಳವಡಿಕೆಗೆ ಸಹಾಯಧನ ನೀಡಲಾಗುತ್ತದೆ.
ಅಲ್ಪಸಂಖ್ಯಾತ ವರ್ಗದವರಿಗೆ ಶೇ.15, ವಿಕಲಾಂಗಚೇತನರಿಗೆ ಶೇ.5 ಮತ್ತು ರೈತ ಮಹಿಳೆಯರಿಗೆ ಶೇ.33 ರಷ್ಟು ಅನುದಾನ ಮೀಸಲಿರಿಸಲಾಗಿದೆ.
ಆಸಕ್ತ ರೈತರು ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ತೋಟಗಾರಿಕೆ ಇಲಾಖೆ ಕಚೇರಿಗೆ ಸಂಪರ್ಕಿಸಿ, ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದು.




