ಬಳ್ಳಾರಿ: ಸಿರುಗುಪ್ಪ ತೋಟಗಾರಿಕೆ ಇಲಾಖೆ ವತಿಯಿಂದ 2024-25 ನೇ ಸಾಲಿಗಾಗಿ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳಡಿ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಿರುಗುಪ್ಪ (ಜಿಪಂ) ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಮಹಾಂತೇಶ ಅವರು ತಿಳಿಸಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಸೌಲಭ್ಯಗಳು: ಫಲಾನುಭವಿ ಆಧಾರಿತ ನರೇಗಾ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಸಣ್ಣ, ಅತಿ ಸಣ್ಣ ರೈತರಿಗೆ ಬಾಳೆ, ಅಂಜೂರ, ತಾಳೆಬೆಳೆ, ದಾಳಿಂಬೆ, ಸಪೋಟ, ಮಾವು, ನುಗ್ಗೆ, ತೆಂಗು, ಪಪ್ಪಾಯ ಮತ್ತು ಪೇರಲ ಬೆಳೆಗಳನ್ನು ಬೆಳೆಯಲು ಹಾಗೂ ಕೊಳವೆ ಬಾಯಿ ಮರುಪೂರ್ಣ ಘಟಕ ಮಾಡಲು ಸಹಾಯಧನ ನೀಡಲಾಗುವುದು.
ನೀರಾವರಿ ಸೌಕರ್ಯವುಳ್ಳ ರೈತರು ತಮ್ಮ ಜಮೀನುಗಳಲ್ಲಿ ಕಾಮಗಾರಿ ಕೈಗೊಂಡಲ್ಲಿ ನರೇಗಾ ಯೋಜನೆಯ ಅನುದಾನ ಬಳಸಿ ಕೂಲಿ ಮೊತ್ತವನ್ನು ಮತ್ತು ಸಾಮಗ್ರಿ ವೆಚ್ಚವನ್ನು ಆನ್‍ಲೈನ್ ಮೂಲಕ ಪಾವತಿ ಮಾಡಲಾಗುತ್ತದೆ.
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಸಮುದಾಯ ಕೃಷಿಹೊಂಡ, ಹೊಸ ಪ್ರದೇಶ ವಿಸ್ತರಣೆ, ದಾಳಿಂಬೆ, ಅಂಜೂರ, ಈರುಳ್ಳಿ ಶೇಖರಣಾ ಘಟಕ, ಪಾಲಿಹೌಸ್ ನಿರ್ಮಾಣ ಮಾಡಿಕೊಳ್ಳಲು ಸಹಾಯಧನ ನೀಡಲಾಗುವುದು.
ಪ್ರಧಾನಮಂತ್ರಿ ಕೃಷಿ ಸಿಂಚಾಯನ ಯೋಜನೆಯಡಿ ತೋಟಗಾರಿಕೆ ಬೆಳೆ ಬೆಳೆಯುವ ರೈತರಿಗೆ ಹನಿ ನೀರಾವರಿ ಸೌಲಭ್ಯವನ್ನು ನೀಡಲಾಗುವುದು.
ಅರ್ಹ ರೈತರು ಸದುಪಯೋಗಪಡೆದುಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




