ಕಾರವಾರ: ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಿತದಷ್ಟಿಯಿಂದ ಅವರಿಗೆ ಸುಸಜ್ಜಿತ ವಸತಿ ನಿಲಯ ಒದಗಿಸುವುದು ಸೇರಿದಂತೆ ವಸತಿ ನಿಲಯದಲ್ಲಿ ಯಾವುದೇ ಕೊರತೆಯಾಗದಂತೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಎಂಸಿಎ ಅಧ್ಯಕ್ಷ ಹಾಗೂ ಶಾಸಕ ಸತೀಶ್ ಸೈಲ್ ಹೇಳಿದರು.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಶೇಜವಾಡದಲ್ಲಿ 2 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಕಟ್ಟದ ಉದ್ಘಾಟಿಸಿ ಮಾತನಾಡಿದರು.
ಈ ವಿದ್ಯಾರ್ಥಿನಿಲಯದ ಕಟ್ಟಡ ಕಾಮಗಾರಿ ಪೂರ್ಣಗೊಂಡು ವರ್ಷಗಳು ಕಳೆದಿದ್ದರು ಸೂಕ್ತ ರಸ್ತೆ ಸೌಲಭ್ಯ ಇಲ್ಲದ ಕಾರಣ ಇದು ವಿದ್ಯಾರ್ಥಿಗಳ ಉಪಯೋಗಕ್ಕೆ ಲಭ್ಯವಾಗಿರಲಿಲ್ಲ. ಈ ಬಗ್ಗೆ ಅರಿತು ವಿಶೇಷ ಮುತುವರ್ಜಿ ವಹಿಸಿ ಶಾಸಕರ ನಿಧಿಯಿಂದ ಈ ಕಟ್ಟಡಕ್ಕೆ 40 ಲಕ್ಷ ರೂ ವೆಚ್ಚದಲ್ಲಿ ಸುಸಜ್ಜಿತ ಕಾಂಕ್ರೀಟ್ ರಸ್ತೆ ನಿರ್ಮಿಸಿರುವುದು ಮಾತ್ರವಲ್ಲದೆ ವಿದ್ಯುತ್ ವ್ಯವಸ್ಥೆ ಮತ್ತು ಕಟ್ಟಡಕ್ಕೆ ಸೂಕ್ತ ಗೇಟ್ ಸೌಲಭ್ಯ ಒದಗಿಸಲಾಗಿದೆ ಎಂದರು.
ರಾಜ್ಯದ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳ ರಾಜ್ಯದಲ್ಲಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಯಾವುದೇ ಕೊರತೆಯಾಗದಂತೆ ಎಲ್ಲಾ ಸೌಲಭ್ಯಗಳನ್ನು ಒದಗಿಸುವಂತೆ ನಿರ್ದೇಶನ ನೀಡಿದ್ದು, ಇಲ್ಲಿನ ವಿದ್ಯಾರ್ಥಿಗಳು ವಿದ್ಯಾರ್ಥಿನಿಲಯದಲ್ಲಿ ಯಾವುದೇ ಹೆಚ್ಚಿನ ಸೌಲಭ್ಯದ ಕುರಿತು ಬೇಡಿಕೆ ಸಲ್ಲಿಸಿದ್ದಲ್ಲಿ ವಿದ್ಯಾರ್ಥಿಗಳ ಉಜ್ವಲ ಭವಿಷ್ಯದ ಹಿತದೃಷ್ಟಿಯಿಂದ ಅದನ್ನು ಪೂರ್ಣಗೊಳಿಸಲಾಗುವುದು. ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ವಿದ್ಯಾಭ್ಯಾಸ ಮಾಡುವುದರ ಮೂಲಕ ಸಮಾಜಕ್ಕೆ ಉತ್ತಮ ಸೇವೆ ಸಲ್ಲಿಸಿ ಎಂದರು.
ಕಾರ್ಯಕ್ರಮದಲ್ಲಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಾಜೇಂದ್ರ ರಾಣೆ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ವೀರನಗೌಡ ಪಾಟೀಲ್ ಅಲ್ಪಸಂಖ್ಯಾತ ಇಲಾಖೆಯ ಜಿಲ್ಲಾ ಅಧಿಕಾರಿ ಅಶೋಕ ಗಡ್ಡಿಗೌಡರ ಮತ್ತಿತರರು ಹಾಜರಿದ್ದರು.




