ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದ ಆಡಳಿತ ಮಂಡಳಿಯ ಅಧ್ಯಕ್ಷರು ಯಾರಾಗಬೇಕು ಎನ್ನುವುದು ಅಲ್ಲಿನ ಸದಸ್ಯರ ಆಯ್ಕೆಗೆ ಬಿಟ್ಟಿದ್ದು, ಇದರಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಲು ಹೇಗೆ ಸಾಧ್ಯ?
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ಇಂಥದ್ದೊಂದು ಸಾಮಾನ್ಯ ಜ್ಞಾನ ಇಲ್ಲದ BJP Karnataka ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರೋಪ ಮಾಡಿಕೊಂಡು ಜನರ ದಾರಿ ತಪ್ಪಿಸಲು ಹೊರಟಿದೆ.
ಪಾರ್ಟಿ ವಿಥ್ ಎ ಡಿಫರೆನ್ಸ್ ಎಂದು ಹೇಳಿಕೊಳ್ಳುವ ಬಿಜೆಪಿಯವರು ತಮ್ಮ ಪಕ್ಷದ ‘ರೌಡಿ ಮೋರ್ಚಾ’ ಘಟಕದ ಮೂಲಕ ನಟೋರಿಯಸ್ ರೌಡಿ ಶೀಟರ್ ಸೈಲೆಂಟ್ ಸುನೀಲ್, ವೈಯಾಲಿಕಾವಲ್ ರೌಡಿ ಶೀಟರ್ ಮಲ್ಲಿಕಾರ್ಜುನ್ ಅಲಿಯಾಸ್ ಫೈಟರ್ ರವಿ, ಮಂಗಳೂರು ರೌಡಿಶೀಟರ್ ಸುಹಾಸ್ ಶೆಟ್ಟಿ, ಕಲಬುರಗಿಯ ರೌಡಿ ಶೀಟರ್ ಮಣಿಕಂಠ ರಾಥೋಡ್, ಮೈಸೂರಿನ ಕಾರ್ತಿಕ್, ಅನೇಕಲ್ ಪುರಸಭೆಗೆ ರೌಡಿ ಶೀಟರ್ ಮಂಜುನಾಥ್ .ಎಸ್ ಎಂಬಾತನ ನಾಮನಿರ್ದೇಶನ ಸೇರಿದಂತೆ ರಾಜ್ಯದ ಮೂಲೆ ಮೂಲೆಯಲ್ಲಿ ಇಂಥವರಿಗೆ ಬೆನ್ನೆಲುಬಾಗಿ ನಿಂತು ಪೋಷಿಸಿ – ಬೆಳೆಸಿ ತಮ್ಮ ಬೆಳೆ ಬೇಯಿಸಿಕೊಳ್ಳುವ ಇವರು, ಪ್ರಜಾಸತ್ತಾತ್ಮಕ ಮಾದರಿಯಲ್ಲಿ ಚುನಾವಣೆ ಮೂಲಕ ಆಯ್ಕೆಯಾದ ವಿಚಾರದಲ್ಲಿ ನಮ್ಮ ಸರ್ಕಾರದ ಮೇಲೆ ಗೂಬೆ ಕೂರಿಸಲು ಹೊರಟಿರುವುದು ವಿಪರ್ಯಾಸ.
ಬಿಲ್ಕಿಸ್ ಬಾನು ಅತ್ಯಾಚಾರಿಗಳನ್ನು ಹಾರ, ತುರಾಯಿ ಹಾಕಿ ಸ್ವಾಗತಿಸಿದವರು ನೀವೇ ಅಲ್ಲವೇ? ಇಡೀ ದೇಶದಲ್ಲಿ ಬಿಜೆಪಿ ಶಾಸಕರು, ಸಂಸದರು ನಡೆಸಿರುವ ಅತ್ಯಾಚಾರ, ಕೊಲೆ, ದೌರ್ಜನ್ಯ ಮುಂತಾದ ಪ್ರಕರಣಗಳ ಪಟ್ಟಿಮಾಡುತ್ತಾ ಹೋದರೆ ಅದೇ ಒಂದು ಮಹಾಗ್ರಂಥವೇ ಆಗಬಹುದೇನೊ!
ಮೊದಲು ನೀವು ಕೊಲೆಗಡುಕರು, ಡಕಾಯಿತರು, ಸ್ತ್ರೀ ಪೀಡಕರು, ಕಳ್ಳಕದೀಮರಿಂದ ದೂರವಿರಿ. ನಂತರ ಊರಿಗೆ ಉಪದೇಶ ಕೊಡುವಿರಂತೆ!
– ಕೆಪಿಸಿಸಿ




