ಅಕ್ರಮ ಮರಳು ಗಣಿಗಾರಿಕೆಯನ್ನು ತಡೆಯುತ್ತಿದ್ದ ಶಿವಮೊಗ್ಗ ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ಅವರ ಪುತ್ರ, ಕಾಂಗ್ರೆಸ್ ಪಕ್ಷದ ನೀಚ ಸಂಸ್ಕೃತಿ ಎಂಥದ್ದು, ಮಹಿಳೆಯರ ಮೇಲೆ ಕಾಂಗ್ರೆಸ್ ಪಕ್ಷಕ್ಕೆ ಇರುವ ಧೋರಣೆ ಎಂಥದ್ದು ಎನ್ನುವುದನ್ನ ಮತ್ತೊಮ್ಮೆ ಪ್ರದರ್ಶನ ಮಾಡಿದ್ದಾರೆ.
- ಈ ದೇಶ ಕಟ್ಟಿದ್ದೇ ದಲಿತರು, ನೀಲಿ ಶಾಲು ಬಗ್ಗೆ ಮಾತಾಡೋಕೆ ನೀನ್ಯಾವನೋ?
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
ಸಿಎಂ @sidddarmaiah ಅವರೇ, ತಮ್ಮ ಭ್ರಷ್ಟ ಸರ್ಕಾರದ ಕಿರುಕುಳಕ್ಕೆ ಈಗಾಗಲೇ ರಾಜ್ಯದಲ್ಲಿ 4-5 ಪ್ರಾಮಾಣಿಕ ಅಧಿಕಾರಿಗಳು, ಗುತ್ತಿಗೆದಾರರು ಆತ್ಮಹತ್ಯೆಗೆ ಶರಣಾಗಿದ್ದಾರೆ. ನಿಮ್ಮ ಭ್ರಷ್ಟಾಚಾರದ ದಾಹಕ್ಕೆ ರಾಜ್ಯದಲ್ಲಿ ಇನ್ನೆಷ್ಟು ಬಲಿಯಾಗಬೇಕು?
ಇಷ್ಟಕ್ಕೂ ಶಾಸಕರ ಪುತ್ರನಿಗೆ ಅಧಿಕಾರಿಯೊಂದಿಗೆ ಮಾತನಾಡಲು ಯಾವ ಹಕ್ಕಿದೆ? ಭದ್ರಾವತಿ ಕ್ಷೇತ್ರಕ್ಕೆ ಸಂಗಮೇಶ್ ಅವರು ಶಾಸಕರೋ ಅಥವಾ ಪಾಳೆಗಾರರೋ? ಅಥವಾ ರಾಹುಲ್ ಗಾಂಧಿ ಅವರು ತೋರಿಸುವ ಸಂವಿಧಾನದ ಪುಸ್ತಕದಲ್ಲಿ ಶಾಸಕರ ಮಕ್ಕಳಿಗೆ, ಕುಟುಂಬಸ್ಥರಿಗೂ ಅಧಿಕಾರವಿದೆಯೋ?
ಮಹಿಳೆಯರ ಮೇಲೆ @INCKarnataka ಪಕ್ಷದ ಈ ದಬ್ಬಾಳಿಕೆ, ದೌರ್ಜನ್ಯವನ್ನ ನಾಡಿನ ಜನತೆ ಗಮನಿಸುತ್ತಿದ್ದಾರೆ. ಇದಕ್ಕೆಲ್ಲ ನಾಡಿನ ಮಹಿಳೆಯರು ತಕ್ಕ ಉತ್ತರ ಕೊಡುವ ದಿನ ಬಹಳ ದೂರವಿಲ್ಲ.
– ಆರ್ ಅಶೋಕ್, ವಿಧಾನಸಭೆ ವಿಪಕ್ಷ ನಾಯಕ




