ಬೆಂಗಳೂರು: ರಾಜ್ಯದಲ್ಲಿ ಕೆಲ ದಿನಗಳಿಂದ ತಣ್ಣಗಾಗಿದ್ದ ಸಿಎಂ ಬದಲಾವಣೆ ವಿಚಾರ ಮತ್ತೊಮ್ಮೆ ಚರ್ಚೆಗೆ ಬಂದಿದೆ. ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಕಚೇರಿಯಲ್ಲಿ ದಲಿತ ಸಮುದಾಯಕ್ಕೆ ಸೇರಿದ ಸಚಿವರು ಭೋಜನ ಕೂಟ ನಡೆಸಿರುವುದು ಕುತೂಹಲ ಕೆರಳಿಸಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಈ ನಡುವೆ ಈ ಕುರಿತು ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರದೊಂದಿಗೆ ಮಾತನಾಡಿದ ಅವರು, ಈ ವಿಚಾರದಲ್ಲಿ ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೆಯೋ ಅದೇ ಆಗುತ್ತದೆ. ಎಲ್ಲವನ್ನೂ ತೀರ್ಮಾನ ಮಾಡುವುದು ಹೈಕಮಾಂಡ್. ಈ ವಿಚಾರದ ಬಗ್ಗೆ ನಾನು ಎಷ್ಟು ಬಾರಿ ಸ್ಪಷ್ಟೀಕರಣ ಕೊಡಲಿ ಹೇಳಿ? ಎಂದರು.
ಇಬ್ಬರು, ಮೂವರು ಸಚಿವರು ಜೊತೆಯಲ್ಲಿ ಕುಳಿತು ಮಾತನಾಡಿದ ತಕ್ಷಣ ಚರ್ಚೆ ನಡೆದಿರುವುದು ಇದೇ ವಿಚಾರ ಎಂದು ಯಾಕೆ ಗ್ರಹಿಸುತ್ತೀರಾ? ಊಹಾ ಪತ್ರಿಕೋದ್ಯಮ ಬಿಟ್ಟು ಬಿಡಿ. ಮೂರು ನಾಲ್ಕು ಜನ ಸೇರಿದಾಗ ರಾಜಕೀಯ ಚರ್ಚೆ ಮಾಡುತ್ತೇವೆ. ನನ್ನ ಪ್ರಕಾರ ಡಿನ್ನರ್ ಮೀಟಿಂಗ್ ಅಥವಾ ಸಭೆ ಮಾಡುವುದರಲ್ಲಿ ತಪ್ಪೇ ಇಲ್ಲ. ನೀವು ಅದರಲ್ಲಿ ಹುಡುಕುವ ಗ್ರಹಿಕೆ ಸರಿ ಇಲ್ಲ ಅಷ್ಟೇ ಎಂದರು.
ಮತ್ತೊಂದೆಡೆ ತಮ್ಮ ಕಚೇರಿಯಲ್ಲಿ ಭೋಜನಕೂಟ ರಾಜಕಾರಣ ನಡೆದಿದೆ ಎಂಬ ಸುದ್ದಿಯನ್ನು ಗೃಹ ಸಚಿವ ಪರಮೇಶ್ವರ್ ಅಲ್ಲಗಳೆದಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ವಾಲ್ಮೀಕಿ ಜಾತ್ರೆ ಕುರಿತು ಆಹ್ವಾನ ಪತ್ರ ನೀಡಲು ವಾಲ್ಮೀಕಿ ಸಮುದಾಯದ ಶ್ರೀಗಳು ತಮ್ಮ ಕಚೇರಿಗೆ ಬಂದಿದ್ದರು. ಈ ವೇಳೆ ಅವರ ಜೊತೆಯಲ್ಲಿ ಮಂತ್ರಿಗಳಾದ ರಾಜಣ್ಣ, ಸತೀಶ್ ಜಾರಕಿಹೊಳಿ ಮತ್ತು ಮಹಾದೇವಪ್ಪ ಆಗಮಿಸಿದ್ದರು. ಅವರ ಜೊತೆಯಲ್ಲಿ ಕುಳಿತು ವಾಲ್ಮೀಕಿ ಜಾತ್ರೆ ಕುರಿತು ಮಾತನಾಡಿದ್ದು ಬಿಟ್ಟರೆ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ. ಇದು ಭೋಜನ ಕೂಟ ಅಲ್ಲ ಎಂದರು.
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಪ್ರತಿಕ್ರಿಯೆ ನೀಡಿದ್ದು, ವಿಧಾನಸೌಧದಲ್ಲಿ ಕೆಲಸ ಮಾಡುವ ಸಚಿವರು ಪರಸ್ಪರ ಭೇಟಿಯಾಗುವ ಬಗ್ಗೆಯೂ ಅನು ಮಾನ ಪಡುವುದು ಸರಿಯಲ್ಲ ಎಂದರು.
ಸಚಿವ ಸಂಪುಟ ಸಭೆ ಬಳಿಕ ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರ ಕಚೇರಿಯಲ್ಲಿ ಶಾಸಕರಾದ ಎಚ್.ಸಿ.ಮಹದೇವಪ್ಪ, ಕೆ.ಎನ್.ರಾಜಣ್ಣ ಮತ್ತು ತಾವು ಭೇಟಿಯಾಗಿರುವುದಕ್ಕೆ ನಾನಾ ರೀತಿಯ ವ್ಯಾಖ್ಯಾನಗಳನ್ನು ಮಾಡಲಾಗುತ್ತಿದೆ. ಅಲ್ಲಿ ವಾಲೀಕಿ ಪೀಠದ ಶ್ರೀಗಳು ಇದ್ದಿದ್ದನ್ನು ದೊಡ್ಡದಾಗಿ ಬಿಂಬಿಸಲಾಗುತ್ತಿದೆ ಎಂದರು.
ಶ್ರೀಗಳು ರಾಜಕೀಯಕ್ಕೆ ಬರುತ್ತೇವೆ ತೆಗೆದುಕೊಳ್ಳಿ ಎಂದರು ಎಂದು ಹೇಳುವ ಮೂಲಕ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಜಾರಕಿಹೊಳಿ, ಶ್ರೀಗಳು ಬರುವುದು ರಾಜಕೀಯ ಮಾಡಲಿಕ್ಕಾ? ರಾಜನಹಳ್ಳಿ ಜಾತ್ರೆಗೆ ಕರೆಯಲಿಕ್ಕೆ ಬಂದಿದ್ದರು. ಆ ವೇಳೆ ನಾವು, ಸಚಿವರು ಸೇರಿದ್ದೆವು. ಅದನ್ನು ಪ್ರಶ್ನೆ ಮಾಡಿದರೆ ಹೇಗೆ? ಎಂದು ಪ್ರಶ್ನಿಸಿದರು.




